ರಾಹುಲ್ ಭೇಟಿ ಖಚಿತ: ಸಿದ್ದರಾಮಯ್ಯ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸುವುದು ದೃಢಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಶುಕ್ರವಾರ ಈ ವಿಚಾರವನ್ನು ಖಚಿತಪಡಿಸಿದ್ದು, ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಅವರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸುವುದು ದೃಢಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಶುಕ್ರವಾರ ಈ ವಿಚಾರವನ್ನು ಖಚಿತಪಡಿಸಿದ್ದು,  ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದರು.

ಕಲಾಪ ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗಾರರ  ಜತೆಗೆ ಮಾತನಾಡಿದ ಸಿಎಂ, ರಾಹುಲ್ ಪ್ರವಾಸದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಬಿಬಿಎಂಪಿ ಚುನಾವಣೆಗೆ ಮೊದಲು ಅಥವಾ ನಂತರ ಅವರು ರಾಜ್ಯಕ್ಕೆ ಬರುತ್ತಾರೆ. ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಆಂಧ್ರಕ್ಕೆ ಭೇಟಿ ನೀಡುವ ಮಾರ್ಗದಲ್ಲಿ ರಾಹುಲ್ ಗಾಂಧಿ ಅವರು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ರೈತರ ಆತ್ಮಹತ್ಯೆ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳ ವಿವರಗಳನ್ನು ಈ ಸಂದರ್ಭದಲ್ಲಿ ಅವರಿಗೆ ನೀಡಲಾಗಿದೆ ಎಂದರು. ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ರಾಜ್ಯ ಸರ್ಕಾರ ಹೆದರಿಕೊಂಡಿಲ್ಲ. ಯಾವ ಕ್ಷಣದಲ್ಲೂ ಚುನಾವಣೆ ಎದುರಿಸುವುದಕ್ಕೆ ಸಿದ್ಧ ಮಾತ್ರವಲ್ಲ ಗೆಲುವು ಸಾಧಿಸುತ್ತೇವೆಂಬ ವಿಶ್ವಾಸವಿದೆ. ಇದಕ್ಕಾಗಿ ಎಲ್ಲ ಸಿದ್ಧತೆ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com