
ಬೆಂಗಳೂರು: ಇಲ್ಲಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕದ ಆವರಣದಲ್ಲಿ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸ ಆಚರಣೆ ಹಮ್ಮಿಕೊಳ್ಳಲಾಗಿದೆ.
1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಜಯ ತಂದುಕೊಡಲು ದೇಶಕ್ಕಾಗಿ ಪ್ರಾಣತೆತ್ತ ವೀರ ಯೋಧರ/ ಹುತಾತ್ಮರ ಸ್ಮರಣೀಯ ಸಂಕೇತವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕಾರ್ಗಿಲï ವಿಜಯ ದಿವಸದ ಆಚರಣೆಯನ್ನು ಭಾನುವಾರ ಬೆಳಗ್ಗೆ 8.20ರಿಂದ 9.30ರ ವರೆಗೆ ಆಚರಿಸಲಾಗುತ್ತಿದೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೌರವ ಅತಿಥಿಯಾಗಿ ಗೃಹ ಸಚಿವ ಕೆ.ಜೆ.ಜಾರ್ಜ್ ಆಗಮಿಸಲಿದ್ದಾರೆ.
Advertisement