
ಬೆಂಗಳೂರು: ಮಳೆಗಾಲದ ವಿಧಾನಮಂಡಲದ ಅಧಿವೇಶನವು ಜುಲೈ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ 10 ದಿನ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಜುಲೈನಲ್ಲಿ 20 ದಿನಗಳ ಕಾಲ
ನಡೆಯುವ ಅಧಿವೇಶನದಲ್ಲಿ ಬಜೆಟ್ ಮೇಲೆ ವಿಸ್ತೃತ ಚರ್ಚೆ ನಡೆಯುತ್ತದೆ.
ಬಳಿಕ ಮುಖ್ಯಮಂತ್ರಿಗಳು ಇದಕ್ಕೆ ಉತ್ತರ ನೀಡುತ್ತಾರೆ. ಆದರೆ 20 ದಿನಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಕಷ್ಟ. ಹೀಗಾಗಿ ಹತ್ತು ದಿನ ಬೆಂಗಳೂರಿನಲ್ಲಿ ಇನ್ನು ಹತ್ತು ದಿನ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಚಿವಾಲಯ ಮೂಲಗಳು ತಿಳಿಸಿವೆ.
Advertisement