ಡಿಕೆ ರವಿ
ಡಿಕೆ ರವಿ

ಕೋಲಾರ ಡಿಸಿ ಕಚೇರಿಯ 7 ಮಂದಿಗೆ ಸಿಬಿಐ ನೋಟಿಸ್!

ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ನಿಗೂಢ ಸಾವಿನ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಅಪ್ತ ಸಹಾಯಕರು, ಓರ್ವ ಗನ್ ಮ್ಯಾನ್ ಸೇರಿದಂತೆ...

ಕೋಲಾರ: ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ನಿಗೂಢ ಸಾವಿನ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಅಪ್ತ ಸಹಾಯಕರು, ಓರ್ವ ಗನ್ ಮ್ಯಾನ್ ಸೇರಿದಂತೆ ಒಟ್ಟು 7 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಡಿ.ಕೆ. ರವಿ ಅವರು ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಅವರೊಟ್ಟಿಗೆ ಕೆಲಸ ಮಾಡಿರುವ ಸಿಬ್ಬಂದಿಗೆ ಜೂ. 6 ಮತ್ತು 8ರಂದು ವಿಚಾರಣೆಗಾಗಿ ಬೆಂಗಳೂರಿಗೆ ಬರುವಂತೆ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ. ಜೂ. 1ರಂದು ಕೋಲಾರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲವರ ಬಳಿ ರವಿ ಕುರಿತು ಮಾಹಿತಿ ಸಂಗ್ರಹಿಸಿದ್ದ ಸಿಬಿಐ ಅಧಿಕಾರಿಗಳು, ಮತ್ತೆ ಭೇಟಿ ನೀಡಿ ವಿಚಾರಣೆ ನಡೆಸುವುದಾಗಿ ಹೇಳಿದ್ದರು. ಈಗ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ನೀಡಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com