ಬೆಳಗ್ಗೆ ಪಂಚಾಯಿತಿ ಚುನಾವಣೆ ಫಲಿತಾಂಶ: ಗ್ರಾಮಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕಡ್ಡಾಯ ಮತದಾನ ಜಾರಿಯಾದ ನಂತರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕಡ್ಡಾಯ ಮತದಾನ ಜಾರಿಯಾದ ನಂತರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದೆ. ಅಭ್ಯರ್ಥಿಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.

ರಾಜ್ಯದ 5735 ಗ್ರಾಮ ಪಂಚಾಯತಿಗಳ 84, 854 ಸ್ಥಾನಗಳಿಗೆ 2 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಶೇ.50 ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ ಕಲ್ಪಿಸಿರುವ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ನಾಳೆ ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ 5 ಗಂಟೆ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 30 ಜಿಲ್ಲೆಗಳಲ್ಲಿ ತಲಾ 15 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮೊದಲ ಹಂತದ ಚುನಾವಣೆಯಲ್ಲಿ ಶೇ.82.54 ರಷ್ಟು ಮತದಾನವಾಗಿತ್ತು.  2 ನೇ ಹಂತದಲ್ಲಿ ಶೇ. 80.38 ರಷ್ಟು ಮತದಾನ ನಡೆದಿತ್ತು.

ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಗಳಿಗೆ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.  ಒಂದೇ ಮನೆಯಲ್ಲಿ 5 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದು ವರದಿಯಾಗಿದೆ. ಇನ್ನು ಪಂಚಾಯಿತಿ ಸಮರದಲ್ಲಿ ದಾಯಾದಿಗಳ ಕಲಹ, ಸಹೋದರರ ಸಂಘರ್ಷ, ಅತ್ತೆಸೊಸೆಯರೇ ಪರಸ್ಪರ ವಿರೋಧಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವುದು ಕಂಡು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com