ರಾಜ್ಯದಲ್ಲಿ ಇಂದು ಗುಡುಗು ಸಹಿತ ಮಳೆ

ನಮ್ಮ ರಾಜ್ಯದ ಬಹುತೇಕ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

 ಬೆಂಗಳೂರು:ನಮ್ಮ ರಾಜ್ಯದ ಬಹುತೇಕ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಕರಾವಳಿ, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಹ ಮೋಡ ಕವಿದ ವಾತಾವರಣವಿದ್ದು, ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಬುಧವಾರ ನಗರದಲ್ಲಿ 4.6 ಮಿಲಿ ಮೀಟರ್ ಮಳೆಯಾಗಿತ್ತು. ಇಲ್ಲಿ ಗರಿಷ್ಠ 30.5 ಕನಿಷ್ಠ 21.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಗುಲ್ಬರ್ಗಾದಲ್ಲಿ 41.5 ಡಿಗ್ರಿ, ರಾಯಚೂರಿನಲ್ಲಿ ಕನಿಷ್ಠ 40.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಅದೇ ರೀತಿ ನೈರುತ್ಯ ಮುಂಗಾರು ಕೇರಳ ರಾಜ್ಯವನ್ನು ಮುಂದಿನ 48 ಗಂಟೆಗಳಲ್ಲಿ ಪ್ರವೇಶಿಸಲಿದೆ ಎಂದು ಹವಾಗುಣ ಇಲಾಖೆ ವರದಿ ಮಾಡಿದೆ. ಆದರೂ ಎಲ್ ನಿನೋ ಪರಿಣಾಮದಿಂದ ನೈರುತ್ಯ ಮುಂಗಾರು ತಡವಾಗಿ ಮತ್ತು ನಿಗದಿತ ಪ್ರಮಾಣಕ್ಕಿಂತ ಈ ವರ್ಷ ಕಡಿಮೆ ಮಳೆ ಬೀಳಲಿದೆ ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಮಾರ್ಚ್ ತಿಂಗಳಿನಿಂದ ಮೇವರೆಗೆ ಬೇಸಿಗೆಯಲ್ಲಿ ಹೆಚ್ಚು ಮಳೆ ಸುರಿದಿದ್ದರಿಂದ ಮತ್ತು ನೇಪಾಳದಲ್ಲಿ ಭೂಕಂಪದಿಂದಾಗಿ ಪರ್ವತ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com