7ನೇ ವಿದ್ಯಾರ್ಥಿಗಳಿಗೆ ಕಲಿಕೆಯ ಅರ್ಹತಾ ಪರೀಕ್ಷೆಗೆ ಚಿಂತನೆ: ಕಿಮ್ಮನೆ

ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ 7ನೇ ವಿದ್ಯಾರ್ಥಿಳಿಗೆ ಕಲಿಕೆಯ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಇದರಿಂದ ಷೋಷಕರಿಗೆ ತಮ್ಮ...
ಕ್ಯಾಂಪಸ್ ಜಿಪ್ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕಿಮ್ಮನೆ ರತ್ನಾಕರ್ ಮತ್ತಿತರರು ಹಾಜರಿದ್ದರು.
ಕ್ಯಾಂಪಸ್ ಜಿಪ್ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕಿಮ್ಮನೆ ರತ್ನಾಕರ್ ಮತ್ತಿತರರು ಹಾಜರಿದ್ದರು.

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ 7ನೇ ವಿದ್ಯಾರ್ಥಿಳಿಗೆ ಕಲಿಕೆಯ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಇದರಿಂದ ಷೋಷಕರಿಗೆ ತಮ್ಮ ಮಕ್ಕಳ ಕಲಿಕಾ ಸಾಮಥ್ರ್ಯ ಗೊತ್ತಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ಪ್ರೆಸ್ ಕ್ಲಬ್ ನಲ್ಲಿ ಕ್ಯಾಂಪಸ್ ಜಿಪ್ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ "ಎಜುಕೇಷನ್-2020" ಮೊಬೈಲ್ ಆಪ್ ಬಿಡುಗಡೆ ಮಾಡಿ  ಮಾತನಾಡಿದ ಅವರು, ಮುಂದಿನ ವರ್ಷದ ಜನವರಿ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ 7ನೇ ವಿದ್ಯಾರ್ಥಿಳಿಗೆ ಕಲಿಕೆಯ ಅರ್ಹತಾ ಪರೀಕ್ಷೆ ನಡೆಸಲಾಗುವುದು. 7ನೇ ತರಗತಿಯ ಐದು ವಿಷಯಗಳಿಗೆ 100 ಅಂಕಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಉತ್ತೀರ್ಣ ಅಥವಾ ಅನುತ್ತೀರ್ಣ ಇರುವುದಿಲ್ಲ. ಕೇವಲ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಯಾವ ಹಂತದಲ್ಲಿದೆ ಎಂಬುದನ್ನು ಅರಿತುಕೊಳ್ಳುವ ಉದ್ದೇಶದಿಂದ ಈ ಪರೀಕ್ಷೆ ನಡೆಸಲಾಗುವುದು. ಈಗಾಗಲೇ ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದಿದ್ದಾರೆ.
ಎಲ್ಲಾ ವಿಷಯಗಳಲ್ಲೂ ಅರ್ಹತಾ ಪರೀಕ್ಷೆ ನಡೆಯಲಿದೆ. ಇದು ಅಂತಿಮ ಪರೀಕ್ಷೆಯ ಎರಡು ತಿಂಗಳು ಮೊದಲು ನಡೆಯುತ್ತದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಷೋಷಕರೊಂದಿಗೆ ಚರ್ಚಿಸಿ ಅವರಿಗೆ ವಿಶೇಷ ತರಗತಿ ನಡೆಸಲಿದ್ದಾರೆ ಎಂದ ಅವರು, ರಾಜ್ಯಾದ್ಯಂತ  ಎಲ್ಲಾ ಶಾಲೆಗಳಲ್ಲಿ ಒಂದೇ ದಿನದಲ್ಲಿ ಈ ಪರೀಕ್ಷೆ ಳಗ್ಗೆ 11ರಿಂದ 1ಗಂಟೆಯವರೆಗೆ ನಡೆಯಲಿದೆ. ಈಗ ಒಂದರಿಂದ 10ನೇ ತರಗತಿವರೆಗೆ ವಿದ್ಯಾರ್ಥಿಗಳು ನೇರವಾಗಿ ಉತ್ತೀರ್ಣಗೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ, ಬರವಣಿಗೆ ಸಾಮರ್ಥ್ಯ ಪೋಷಕರಿಗೆ ತಿಳಿಯುತ್ತಿಲ್ಲ. ಎಸ್ಸೆಸ್ಸೆಲ್ಸಿಯಲ್ಲಿ ಇದು ಗೊತ್ತಾಗುತ್ತದೆ. ಇದಕ್ಕೂ ಮೊದಲು 7ನೇ ತರಗತಿಯಲ್ಲಿ ಅವರ ಕಲಿಕಾ ಸಾಮರ್ಥ್ಯವನ್ನು ತಿಳಿದರೆ ಅವರಿಗೆ ವಿಶೇಷ ತರಗತಿ ಮೂಲಕ ಕಲಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ವಿಳಂಬವಾಯಿತು. ಯಾವುದೇ ಸರ್ಕಾರಿ ನೌಕರರ ವರ್ಗಾವಣೆ ಮಾಡಬಾರದು ಎಂದು ಚುನಾವಣಾ ಆಯುಕ್ತರು ಸ್ಪಷ್ಟ ನಿರ್ದೇಶನ ನೀಡಿದ್ದರು. ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ವರ್ಗಾವಣೆಯನ್ನು ಈ ತಿಂಗಳ 27ರವರೆಗೆ ಮುಂದುವರಿಸುವುದಾಗಿ ಕಿಮ್ಮನೆ ವಿವರಿಸಿದರು.
ಜೂನ್ 5ರೊಳಗೆ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕಿತ್ತು. ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಿನಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿದ್ದರಿಂದ ವರ್ಗಾವಣೆ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತೊಂಡಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಈ ತಿಂಗಳ 27ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಪರಿವರ್ತನೆ ಸಹಜ ಪ್ರಕ್ರಿಯೆ: ಜಗತ್ತಿನಲ್ಲಿ ಬದಲಾವಣೆ ಹಾಗೂ ಪರಿವರ್ತನೆ ಸಹಜ ಪ್ರಕ್ರಿಯೆಗಳಾಗಿವೆ. ಇವುಗಳನ್ನು ನಾವು ಸ್ವೀಕರಿಸಬೇಕು. ಶಿಕ್ಷಣ ಕ್ಷೇತ್ರದಲ್ಲೂ ಈ ಬದಲಾವಣೆ ಅನಿವಾರ್ಯ. ಐವರು ಇಂಜಿನಿಯರ್ಗಳು ಸೇರಿ ಮುಂದಿನ 2020ರ ಸಂದರ್ಭದಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಹೇಗಿರಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಮೊಬೈಲ್ ಆಪ್ ಉತ್ತಮವಾಗಿದೆ. ಇವರು ಆವಿಷ್ಕಾರಿಸಿರುವ ಹೊಸ ಸಾಫ್ಟವೇರ್ ನ್ನು ಪ್ರಯೋಗಕ್ಕೆ ತರುವ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com