ನಿಗದಿಗಿಂತ ಹೆಚ್ಚು ಮಕ್ಕಳ ಸಾಗಣೆ: ಶಾಲಾ ವಾಹನಗಳ ವಿರುದ್ಧ ಕ್ರಮ

ನ್ಯಾಯಾಲಯದ ಮಾರ್ಗಸೂಚಿ ಪಾಲಿಸದ ಹಾಗೂ ನಿಗದಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ 1255 ಶಾಲಾ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ...
ನಿಗದಿಗಿಂತ ಹೆಚ್ಚು ಮಕ್ಕಳ ಸಾಗಣೆ: ಶಾಲಾ ವಾಹನಗಳ ವಿರುದ್ಧ ಕ್ರಮ(ಸಾಂದರ್ಭಿಕ ಚಿತ್ರ)
ನಿಗದಿಗಿಂತ ಹೆಚ್ಚು ಮಕ್ಕಳ ಸಾಗಣೆ: ಶಾಲಾ ವಾಹನಗಳ ವಿರುದ್ಧ ಕ್ರಮ(ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ನ್ಯಾಯಾಲಯದ ಮಾರ್ಗಸೂಚಿ ಪಾಲಿಸದ ಹಾಗೂ ನಿಗದಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ 1255 ಶಾಲಾ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

2015-16ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ಸೋಮವಾರ ಶಾಲಾ ವಾಹನಗಳನ್ನು ಪರಿಶೀಲಿಸಿದಾಗ ಬಹುತೇಕ ಬಸ್ ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕೊಂಡೊಯ್ದು ನಿಯಮ ಉಲ್ಲಂಘನೆ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಶಾಲಾ ವಾಹನಗಳು ಕಟ್ಟು ನಿಟ್ಟಾಗಿ ನಿಯಮಗಳನ್ನು ಪಾಲಿಸುವಂತೆ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಶಾಲಾ ಮುಖ್ಯಸ್ಥರು ಹಾಗೂ ಮಕ್ಕಳ ಪೋಷಕರುಸ ಮಕ್ಕಳನ್ನು ಶಾಲಾ ವಾಹನಗಳಲ್ಲಿ ಕಳಿಸುವ ಮುನ್ನ, ಚಾಲಕರು ನ್ಯಾಯಾಲಯದ ನಿಯಮ ಪಾಲಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವಂತೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com