

ಬೆಂಗಳೂರು: ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಅಗತ್ಯವಿದೆ ಎಂದು ಕರ್ನಾಟಕ ದಲಿತ ಹಿಂದುಳಿದ ವರ್ಗಗಳ ರಕ್ಷಣಾ ವೇದಿಕೆ ಹೇಳಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅಂಜನಾಗರ ತ್ಯಾಗರಾಜ್, ಸ್ವಾತಂತ್ರ್ಯ ಬಂದು ಎಷ್ಟೋ ವರ್ಷಗಳಾದರು, ಅಸ್ಪೃಶ್ಯತೆ ಮಾತ್ರ ತೊಲಗಿಲ್ಲ. ರಾಜಕಾರಣದಲ್ಲಿ ಈ ಅಸ್ಪೃಶ್ಯತೆ ಹೆಚ್ಚಾಗಿದ್ದು, ದಲಿತರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂದಿನಕಾಲದಿಂದಲೂ ಕಾಂಗ್ರೆಸ್ ನಲ್ಲಿ ಗಟಾನುಗಟಿ ದಲಿತ ನಾಯಕರು ಇದ್ದರು. ಅವರಿಗಿನ್ನೇನು ಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವಷ್ಟರಲ್ಲಿ, ಕುತಂತ್ರ ನಡೆಸಿ ಸ್ಥಾನ ಕಿತ್ತುಕೊಳ್ಳುತ್ತಿದ್ದರು. ಕಾಂಗ್ರೆಸ್ ನಲ್ಲಿ ಕೇವಲ ವೋಟ್ ಬ್ಯಾಂಕಿಗಾಗಿ ದಲಿತರನ್ನು ಬಳಸಿಕೊಳ್ಳುತ್ತಿದೆ. ದಲಿತರಿಗೆ ನೀಡಬೇಕಾದ ಸ್ಥಾನಮಾನ ನೀಡುತ್ತಿಲ್ಲ ಎಂದು ಆಪಾದಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ದಲಿತ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಅಥವಾ ಯಾವುದೇ ಪಕ್ಷ ಅಧಿಕಾರಕ್ಕೆ ಬರಲಿ, ದಲಿತನಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲವಾದರೆ ಇದರ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.