
ಬೆಂಗಳೂರು: ರಾಜ್ಯ ಗೃಹ ಸಚಿವ ಕೆ.ಜೆ ಜಾರ್ಜ್ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾರ್ಜ್ ಅಕ್ರಮ ಆಸ್ತಿ ಗಳಿಕೆ ಸಂಬಂಧ ಸಾಕಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದ್ದರು, ಜಾರ್ಜ್ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಚುನಾವಣೆ ಆಯೋಗಕ್ಕೆ ಕೆಜೆ ಜಾರ್ಜ್ ಅವರು ತಪ್ಪು ಮಾಹಿತಿ ನೀಡಿದ್ದಾರೆ. ಸಾಕಷ್ಟು ಬಾರಿ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್ ಹೆಸರಲ್ಲಿ ಅಕ್ರಮವಾಗಿ ಸೈಟ್ ಗಳನ್ನು ನೋಂದಣಿಯಾಗಿರುವುದಲ್ಲದೇ, ಅನೇಕ ಶೇರು ಸೇರಿದಂತೆ ಇತರ ಜಾರ್ಜ್ ಅವ್ಯವಹಾರಗಳ ಬಗ್ಗೆ ಅನೇಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ.
'ಎಸ್.ಆರ್.ಹಿರೇಮಠ ಅವರು ತಮ್ಮ ವಿರುದ್ಧದ ಆರೋಪಗಳಿಗೆ ದಾಖಲೆ ನೀಡಲಿ, ಆಗ ಬೇಕಾದರೆ ರಾಜಿನಾಮೆ ನೀಡುತ್ತೇನೆ' ಎಂದು ಕೆಜೆ ಜಾರ್ಜ್ ಸವಾಲು ಹಾಕಿದ್ದರು. ಹಾಗಾಗಿ, ಜಾರ್ಜ್ ಅಕ್ರಮದ ಬಗ್ಗೆ ನಾವು ಸಾಕಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದ್ದೆವು. ಆದರೆ ಇದರ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಜಾರ್ಜ್ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
Advertisement