ಜೂ.15ರಂದು ಬೀದಿ ಬದಿ ವ್ಯಾಪಾರಿಗಳ ಬೃಹತ್ ಪ್ರತಿಭಟನೆ

ಬೀದಿ ಬದಿ ವ್ಯಾಪಾರಿಗಳ ತೆರವು ನಿಲ್ಲಿಸಬೇಕು. ತೆರವು ಮಾಡಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೂಡಲೇ ವ್ಯಾಪಾರ ಮಾಡಲು ಸ್ಥಳ ನೀಡಬೇಕು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ತೆರವು ನಿಲ್ಲಿಸಬೇಕು ಹಾಗೂ ತೆರವುಗೊಳಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೂಡಲೇ ವ್ಯಾಪಾರ ಮಾಡಲು ಸ್ಥಳ ನೀಡಬೇಕು ಎಂದು ಒತ್ತಾಯಿಸಿ ಜೂ 15ರಂದು ಬೀದಿ ವ್ಯಾಪಾರಿಗಳು ಬೃಹತ್  ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೃಹತ್ ಬೆಂಗಳೂರು ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಿನಯ್ ಶ್ರೀನಿವಾಸ್, ಬೀದಿ ಬದಿ ವ್ಯಾಪಾರಿಗಳ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಕಾನೂನು ಜಾರಿಗೊಳಿಸಿದ್ದರೂ ಪೊಲೀಸರು ಕಿರುಕುಳ, ಹಫ್ತಾ ವಸೂಲಿ ನಿಂತಿಲ್ಲ. ಅಲ್ಲದೆ ನಿರಂತರವಾಗಿ ಎತ್ತಂಗಡಿ ಮಾಡುತ್ತಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದರು.

ಇದರಿಂದ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜೂನ್ 15 ಬೆಳಗ್ಗೆ 10 ಗಂಟೆಗೆ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಥಾ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com