
ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಕುರಿತು ಸಿಐಡಿ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರೇ ಶಾಮೀಲಾಗಿದ್ದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ ಹೇಳಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದಾರೆನ್ನುವಆರೋಪದಡಿ ಮೂವರು ಪೇದೆಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಿಐಡಿ ಅಧಿಕಾರಿಗಳು ಪ್ರಕರಣದ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿರುವ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ಏನೆಲ್ಲ ಮಾಹಿತಿಕಲೆ ಹಾಕಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಹಿರಿಯ-ಕಿರಿಯ ಅಧಿಕಾರಿ ಗಳೆನ್ನದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಧಿಕಾರಿ, ಸಿಬ್ಬಂದಿಯನ್ನು ಉಳಿಸುವ ಪ್ರಶ್ನೆಯೇ ಇಲ್ಲ. ಪ್ರಕರಣದ ತನಿಖೆ ಸಿಐಡಿ ಅಧಿಕಾರಿಗಳಿಗೆ ವಹಿಸಿರುವುದರಿಂದ ನಿಷ್ಪಕ್ಷಪಾತವಾಗಿ ನಡೆಯಲಿದೆ.
ತನಿಖೆ ನಡೆಯುತ್ತಿರುವಾಗ ಯಾವುದೇ ಅಧಿಕಾರಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸರಿಯಲ್ಲ. ಅಧಿಕಾರಿಗಳು ತಪ್ಪೆಸಗಿರುವ ಬಗ್ಗೆ ಸಿಐಡಿ ವರದಿ ನೀಡಿದರೆ, ಆ ಕ್ಷಣವೇ ಶಿಸ್ತು ಕ್ರಮಗೊಳ್ಳಲಾಗುವುದು ಎಂದರು. ಹುಬ್ಬಳ್ಳಿಯಲ್ಲಿನ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿರುವುದನ್ನು ಸುವರ್ಣ ಸುದ್ದಿ ವಾಹಿನಿ ಸ್ಟಿಂಗ್
ಆಪರೇಷನ್ ಮೂಲಕ ಬಯಲಿಗೆಳೆದಿತ್ತು. ಆನಂತರ ಡಿಎಸ್‍ಪಿ ಹಾಗೂ ಮೂವರು ಪೇದೆಗಳನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
Advertisement