
ಬೆಂಗಳೂರು: ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ಮುಂಜಾನೆ ನಡೆದಿರುವುದಾಗಿ ತಿಳಿದುಬಂದಿದೆ.
ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ರೈಲು ಅಪಘಾತ ಸಂಭವಿಸಿದ್ದು, ಇಂದು ಬೆಳಿಗ್ಗೆ 4.25ರ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ ರೈಲಿನ ಮೊದಲ ಮತ್ತು ಎರಡನೇ ಎಸಿ ಬೋಗಿಗಳು ಅಪಘಾತಕ್ಕೀಡಾಗಿದ್ದು ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸುತ್ತಿದ್ದಾರೆ.
Advertisement