ಪಾದಚಾರಿ ಮಾರ್ಗ ಒತ್ತುವರಿ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ರಾಜಾಜಿನಗರದ ಇಎಸ್‍ಐ ಆಸ್ಪತ್ರೆ ಬಳಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುವಂತೆ ಕೋರಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ...
ಕರ್ನಾಟಕ ಹೈ ಕೋರ್ಟ್
ಕರ್ನಾಟಕ ಹೈ ಕೋರ್ಟ್

ಬೆಂಗಳೂರು: ರಾಜಾಜಿನಗರದ ಇಎಸ್‍ಐ ಆಸ್ಪತ್ರೆ ಬಳಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುವಂತೆ ಕೋರಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ರಾಜಾಜಿನಗರದ 3ನೇ ಬ್ಲಾಕ್, 17ನೇ ಮುಖ್ಯರಸ್ತೆಯಲ್ಲಿನ ಪಾದಚಾರಿ ಮಾರ್ಗವನ್ನು ಕೆಲವರು ಒತ್ತುವರಿ ಮಾಡಿ ಸುಮಾರು 30 ಅಂಗಡಿಗಳನ್ನು ನಿರ್ಮಿಸಿದ್ದಾರೆ. ಇದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಪಾದಚಾರಿಗಳು ನಡೆದಾಡುವುದೆ ಕಷ್ಟವಾಗಿದೆ. ಆದ್ದರಿಂದ ಒತ್ತುವರಿ ತೆರವುಗೊಳಿಸುವಂತೆ ಪಾಲಿಕೆಗೆ ಸೂಚಿಸಬೇಕೆಂದು ಕೋರಿ ಗೀತಾ ಮಿಶ್ರ ಸೇರಿ ಆರು ಜನ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ. ಮುಖರ್ಜಿ ಮತ್ತು ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಿದೆ. ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸ್ಥಳೀಯರು ಪಾಲಿಕೆ ಆಯುಕ್ತರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರು. ಆದರೆ, ಆಯುಕ್ತರು ಮನವಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆಯುಕ್ತರಿಗೆ ಯಾವುದೇ ಮನವಿ ಮಾಡಿದ್ದರೂ ಈವರೆಗೂ ಪ್ರಯೋಜನವಾಗಲಿಲ್ಲ. ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುವಂತೆ ಹಿಂದೆ ಇದೇ ಪೀಠ ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ಅ„ಕಾರಿಗಳು ಒತ್ತುವರಿದಾರ ವಿರುದಟಛಿ ಶಿಸ್ತು ಕ್ರಮ ಜರುಗಿಸಲು ಮುಂದಾಗುತ್ತಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com