ಹಳೇ ಸರಗಳ್ಳತನ ಆರೋಪಿಗಳ ಪರೇಡ್

ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು...
ಹಳೇ ಸರಗಳ್ಳತನ ಆರೋಪಿಗಳ ಪರೇಡ್ (ಸಾಂದರ್ಭಿಕ ಚಿತ್ರ)
ಹಳೇ ಸರಗಳ್ಳತನ ಆರೋಪಿಗಳ ಪರೇಡ್ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಸರಗಳ್ಳರ ಅಟಾಟೋಪ ನಿಯಂತ್ರಣಕ್ಕೆ ಕಸರತ್ತು ಮುಂದುವರೆಸಿರುವ ಕೇಂದ್ರ ವಿಭಾಗದ ಪೊಲೀಸರು ಬುಧವಾರ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳನ್ನು ಠಾಣೆಗಳಿಗೆ ಕರೆಸಿ ಬುದ್ಧಿ ಮಾತು ಹೇಳಿ ಕಳುಹಿಸಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಗರ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಂದ ಬಂಧಿತರಾಗಿ ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಸುಮಾರು 71 ಮಂದಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ಕರೆಸಿ ಬುದ್ಧಿ ಮಾತು ಹೇಳಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ನಡೆದ ಸರಣಿ ಸರಗಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಹಳೆ ಸರಗಳ್ಳತನ ಪ್ರಕರಣದ ಆರೋಪಿಗಳನ್ನು ಠಾಣೆಗೆ ಕರೆಸಿ ಪರೇಡ್ ನಡೆಸಲಾಯಿತು.

ಆರೋಪಿಗಳು, ಸದ್ಯ ನಡೆಸುತ್ತಿರುವ ಚಟುವಟಿಕೆಗಳು, ವೃತ್ತಿ ಹಾಗೂ ಆರ್ಥಿಕ ವ್ಯವಹಾರ ಸೇರಿದಂತೆ ಅವರ ಎಲ್ಲಾ ಮಾಹಿತಿ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ನಾಗರೀಕರಾಗಿ ಜೀವನ ನಡೆಸಬೇಕು. ಮತ್ತೆ ಸರಗಳ್ಳತನ ಸೇರಿದಂತೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com