
ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್ ಪ್ರಥಮ ಅಂತಾರಾಷ್ಟ್ರೀಯ ಯೋಗದಿನ ಪ್ರಯುಕ್ತ ಯೋಗ ಪ್ರದರ್ಶನ ಮತ್ತು ಸಾರ್ವಜನಿಕ ಸಮಾರಂಭವನ್ನು ಜೂನ್ 21ರಂದು ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ, ನಾಶನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ ಮತ್ತು ಬೃಹತ್ ಕಾರ್ಯಕ್ರಮ ನಡೆಲಿದ್ದು, ರಾಜ್ಯಪಾಲ ವಜುಭಾಯಿ ವಾಲ, ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೋಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸುಮಾರು 20 ನಿಮಿಷಗಳ ಕಾಲ 7000 ಜನರು ಆಕರ್ಷಕ ಯೋಗಪ್ರದರ್ಶನ ನೀಡಲಿದ್ದಾರೆ ಹಾಗೂ ಯೋಗ ಸಂಬಂಧಿತ ವಿಶೇಷ ಲೇಖನ ಮಾಹಿತಿಗಳನ್ನೊಳಗೊಂಡ ಸ್ಮರಣಸಂಚಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement