ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ರಾಜಿನಾಮೆಗೆ ಆಗ್ರಹ
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣದ ನೈತಿಕ ಹೊಣೆ ಹೊತ್ತು ನ್ಯಾ.ಭಾಸ್ಕರ್ ರಾವ್ ಅವರು ಲೋಕಾಯುಕ್ತ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಬಿಎಂ ಶಿವಕುಮಾರ್, ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರಿಗಳಿಗೆ ಸಿಂಹ ಸ್ವಪ್ನದಂತಿದ್ದ ಸಂಸ್ಥೆ. ಆದರೆ, ಇಂತಹ ಸಂಸ್ಥೆಯಲ್ಲಿ ಭ್ರಷ್ಟಾಚಾರತೆ ನಡೆಯುತ್ತಿರುವು ವಿಷಾದನೀಯ ಸಂಗತಿ. ನ್ಯಾ. ವೆಂಕಟಾಚಲಯ್ಯ ಮತ್ತು ನ್ಯಾ.ಸಂತೋಷ್ ಹೆಗಡೆ ಅವರ ಪ್ರಾಮಾಣಿಕ ಆಡಳಿತದಿಂದಾಗಿ ಅನೇಕ ಭ್ರಷ್ಟಾಚಾರಿಗಳನ್ನು ಹತ್ತಿಕ್ಕಿದರು. ಅಂತಹ ಸಂಸ್ಥೆಯ ಮೇಲೆ ಇಂತಹ ಆರೋಪ ಕೇಳಿ ಬಂದಿರುವುದಕ್ಕೆ ಈಗಿನ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಅವರೇ ಕಾರಣ ಎಂದಿದ್ದಾರೆ.
ದಕ್ಷ ಅಧಿಕಾರಿ ಸೋನಿಯಾ ನಾರಂಗ್ ಅವರೇ ಪತ್ರವೊಂದರಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹೇಳಿರಬೇಕಾದರೆ. ಇದರಲ್ಲಿ ದೊಡ್ಡ ಮಟ್ಟದ ತಿಮಿಂಗಲಗಳೇ ಭಾಗಿಯಾಗಿರುತ್ತಾರೆ. ಯಾವುದೇ ಆಧಾರಗಳಿಲ್ಲದೇ ಸೋನಿಯಾ ನಾರಂಗ್ ಅವರು ಆರೋಪ ಮಾಡಿರುವುದಿಲ್ಲ. ಹಾಗಾಗಿ, ರಾಜ್ಯಪಾಲರು ಸಂಸ್ಥೆಯಲ್ಲಿ ನಡೆಯುತ್ತಿರುವ ಹಗರಣದ ಬಗ್ಗೆ ಸೂಕ್ತ ತನಿಖೆ ಆದೇಶಿಸಬೇಕು ಎಂದ ಅವರು, ಸಂಸ್ಥೆಯಲ್ಲಿ ನಡೆದಿರುವ ಹಗರಣದ ಬಗ್ಗೆ ನೈತಿಕ ಹೊಣೆ ಹೊತ್ತು ನ್ಯಾ.ವೈ ಭಾಸ್ಕರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ, ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ