ಜಿಲ್ಲಾ ಸುದ್ದಿ

ನಿವೃತ್ತಿ ಭತ್ಯೆ ಏರಿಕೆಗೆ ಆಗ್ರಹ

ನಿವೃತ್ತಿ ಭತ್ಯೆ ಏರಿಕೆಗೆ ಆಗ್ರಹ
Published On :

ಬೆಂಗಳೂರು: ನಿವೃತ್ತ ನೌಕರರ ಬೇಡಿಕೆ ಈಡೇರಿಸದ ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಸತ್ತ ಮರಗಳೆಂದು ಪರಿಗಣಿಸಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಖದ ಅಧ್ಯಕ್ಷ ಡಿ.ಎನ್ ಸಂಪತ್, ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಕಡೆಗಣಿಸುತ್ತಾ ಬಂದಿದೆ. ನಿವೃತ್ತ ನೌಕರರಿಗೆ ಯಾವುದೇ ರೀತಿಯ ಸೌಲಭ್ಯ ನೀಡದೇ ವಂಚಿಸುತ್ತಿದೆ. ಶಾಸಕರು, ಮಂತ್ರಿಗಳು, ಐಎಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದರೂ ಅವರ ಅನುಕೂಲಗಳಿಗೆ ತಕ್ಕಂತೆ ಸೌಲಭ್ಯ ಕಲ್ಪಿಸಿ, ಭತ್ಯೆ ಹೆಚ್ಚಾಗಿ ನೀಡಲಾಗುತ್ತಿದೆ. ಆದರೆ, 30 ರಿಂದ 35 ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿದ ನಮಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಪಿಂಚಣಿ ಇಲಾಖೆ ನಿದ್ರೇಶಕರು ಶಿಫಾರಸ್ಸು ಮಾಡಿರುವಂತೆ ರಾಜ್ಯ ನಿವೃತ್ತ ನೌಕರರಿಗೆ, ನಿವೃತ್ತಿ ವಯೋಮಾನ ಭತ್ಯೆಯನ್ನು ಹೆಚ್ಚಿಸಬೇಕು, ಜ್ಯೋತಿ ಸಂಜೀವಿನಿ ಆರೋಗ್ಯ ಭಾಗ್ಯ ಯೋಜನೆಯನ್ನು ನಿವೃತ್ತ ನೌಕರರಿಗೂ ವಿಸ್ತರಿಸಬೇಕು, ನಿವೃತ್ತರ ಶವಸಂಸ್ಕಾರಕ್ಕಾಗಿ ಧನ ಸಹಾಯ ನೀಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.