ಬೆಂಗಳೂರಿನಲ್ಲಿ ಯೋಗ ದಿನಾಚರಣೆ: ನಟಿ ಶಿಲ್ಪಾ ಶೆಟ್ಟಿ ಭಾಗಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪಾಲ್ಗೊಂಡಿದ್ದರು.
ಬೆಂಗಳೂರಿನಲ್ಲಿ ಯೋಗದಿನಾಚರಣೆ
ಬೆಂಗಳೂರಿನಲ್ಲಿ ಯೋಗದಿನಾಚರಣೆ
Updated on: 

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪಾಲ್ಗೊಂಡಿದ್ದರು.

ಯೋಗ ಗುರು ಶ್ರೀ ವಚನಾನಂದ ಶ್ರೀಗಳ ನೇತೃತ್ವದಲ್ಲಿ ನಡೆದ ವಿಶೇಷ ಯೋಗ ಕಾರ್ಯಕ್ರಮದಲ್ಲಿ ನಟಿ ಶಿಲ್ಪಾಶೆಟ್ಟಿ ಪಾಲ್ಗೊಂಡು ಕೆಲಹೊತ್ತು ಯೋಗಾಭ್ಯಾಸ ಕೂಡ ಮಾಡಿದರು. ಈ ವೇಳೆ ಮಾತನಾಡಿದ ಅವರು, ಯೋಗದಿಂದ ಮನಸ್ಸು ಮತ್ತು ದೇಹ ಎರಡೂ ಆರೋಗ್ಯವಾಗಿರುತ್ತದೆ. ನಾನು ಕೂಡ ನಿತ್ಯ ಯೋಗ ಮಾಡುತ್ತೇನೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆಗೆ ಬರುವ ಮೂಲಕ ಯೋಗದ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಸಚಿವ ಸಂಪುಟದ ಕೆಲ ಮಂತ್ರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರತಿನಿತ್ಯ ಒಂದು ಗಂಟೆ ಯೋಗಾಭ್ಯಾಸ ಮಾಡುವುದರಿಂದ ಬದುಕಿರುವಷ್ಟು ದಿನ ಆರೋಗ್ಯದಿಂದ ಬಾಳಬಹುದು ಎಂದು ಹೇಳಿದರು.

ಇದೇ ವೇಳೆ ಯೋಗ ಗುರು ಶ್ರೀ ವಚನಾನಂದ ಶ್ರೀಗಳು ಕ್ರೀಡಾಂಗಣದಲ್ಲಿ ನೆರೆದಿದ್ದವರಿಗೆ ಯೋಗ ಪಾಠ ಮಾಡಿದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಟಿ ಶಿಲ್ಪ ಶೆಟ್ಟೆ ಸೇರಿದಂತೆ ಅಲ್ಲಿ ನೆರೆದಿದ್ದವರೆಲ್ಲರೂ ಯೋಗಾಭ್ಯಾಸ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com