ಸ್ವಚ್ಛತೆಯಲ್ಲೂ ಸುಣ್ಣ-ಬೆಣ್ಣೆ ರಾಜಕೀಯ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಸ್ವಚ್ಛ ಭಾರತ ಅಭಿಯಾನದ ಮುಖ್ಯಮಂತ್ರಿಗಳ ಉಪಸಮಿತಿ ಸಭೆ ಬುಧವಾರ ಬೆಂಗಳೂರಿನಲ್ಲಿ ನಡೆಯಲಿದೆ...
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
Updated on: 

ಬೆಂಗಳೂರು: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಸ್ವಚ್ಛ ಭಾರತ ಅಭಿಯಾನದ ಮುಖ್ಯಮಂತ್ರಿಗಳ ಉಪಸಮಿತಿ ಸಭೆ ಬುಧವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅನುದಾನ ವ್ಯತ್ಯಾಸ ಕುರಿತಂತೆ ಕೇಂದ್ರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಈ ಉಪಸಮಿತಿ ಸಭೆಯ ಸದಸ್ಯರಾಗಿ ಭಾಗವಹಿಸಲಿದ್ದಾರೆ. 2019ರಲ್ಲಿ ನಡೆಯುವ ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ವೇಳೆಗೆ ಸಂಪೂರ್ಣ ನೈರ್ಮಲ್ಯ ಹಾಗೂ ಸ್ವಚ್ಛತೆ ಉತ್ತಮಪಡಿಸಿಕೊಳ್ಳುವ ದಿಶೆಯಲ್ಲಿ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ರಾಜ್ಯದಿಂದ ಆಕ್ಷೇಪ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಈ ಯೋಜನೆ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಉಪಸಮಿತಿಗೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮನ್ವಯಾಧಿಕಾರಿಯಾಗಿ ನೇಮಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಅವರು ಇದನ್ನು ನಿರಾಕರಿಸಿದ್ದರು.

ಯೋಜನೆಗೆ ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ವ್ಯತ್ಯಾಸ ಮಾಡುತ್ತಿದೆ ಎಂಬ ನಿಲುವನ್ನು ಈಗ ರಾಜ್ಯ ಸರ್ಕಾರ ತಳೆದಿದೆ. 75:25ರ
ಅನುಪಾತದಡಿ, ಅಂದರೆ ಶೇ.75ರಷ್ಟು ಹಣ ರಾಜ್ಯದಿಂದ ಹಾಗೂ ಶೇ.25ರಷ್ಟು ಕೇಂದ್ರದಿಂದ ಅನುದಾನ ರೂಪದಲ್ಲಿ ನೀಡಲಾಗುತ್ತದೆ. ಎಲ್ಲ ರಾಜ್ಯಗಳು ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಆದರೆ, ರಾಜ್ಯದಲ್ಲಿ ಪ್ರತಿ ಪಂಚಾಯಿತಿಗೆ ಕೇವಲ ರು.4,000 ಮಾತ್ರ ನಿಗದಿ ಮಾಡಲಾಗಿದೆ.  ಆಂಧ್ರಪ್ರದೇಶ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಇದು ರು.8,000ವರೆಗೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರದ ತಾರತಮ್ಯ ನೀತಿ ಬಗ್ಗೆ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com