

ಚಾಮರಾಜನಗರ: ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ, ರು.10 ಸಾವಿರ ದಂಡ ವಿಧಿಸಿರುವುದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಹೊಸ ಮೀಸಲು ಪಟ್ಟಿಯಂತೆ ಚುನಾವಣೆ ನಡೆಸಲು ಅವಕಾಶ ಕೋರಿದ್ದೆವು. ಆದರೆ, ನ್ಯಾಯಾಲಯ 2001ರ ಮೀಸಲಿನಂತೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದೆ.
ನ್ಯಾಯಾಲಯದಲ್ಲಿ ಒಳ್ಳೆಯದು ಆಗುತ್ತದೆ. ಕೆಟ್ಟದ್ದೂ ಆಗುತ್ತದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಮಾಡಿದ ಟೀಕೆಗಳಿಗೆ ನಾವು ಉತ್ತರಿಸುವ ಅಗತ್ಯವಿಲ್ಲ. ವಿರೋಧ ಪಕ್ಷಗಳಿಗೆ ಟೀಕೆ ಮಾಡುವುದೇ ಕೆಲಸ ಎಂದು ಕಿಡಿಕಾರಿದರು.