ಕಲಾ ಪದವಿ(ಸಾಂದರ್ಭಿಕ ಚಿತ್ರ)
ಕಲಾ ಪದವಿ(ಸಾಂದರ್ಭಿಕ ಚಿತ್ರ)

ಕಲಾ ಪದವಿ ಶಿಕ್ಷಣ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿತ

2015 -16 ನೇ ಸಾಲಿನ ಪದವಿ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು ಪ್ರಸಕ್ತ ಸಾಲಿನಲ್ಲಿ ಕಲಾ ಪದವಿ ವಿಷಯವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.

ಬೆಂಗಳೂರು: 2015 -16 ನೇ ಸಾಲಿನ ಪದವಿ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು ಪ್ರಸಕ್ತ ಸಾಲಿನಲ್ಲಿ ಕಲಾ ಪದವಿ ವಿಷಯವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.

ಬಹುತೇಕ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ವಾಣಿಜ್ಯ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಪದವಿ ಪೂರ್ವ ಶಿಕ್ಷಣದ ಸ್ಥಿತಿಯೂ ಇದೇ ಆಗಿದ್ದು ಹೆಚ್ಚಿನ ವಿದ್ಯಾರ್ಥಿಗಳು ವಾಣಿಜ್ಯ ಹಾಗೂ ವಿಜ್ಞಾನದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಬಿ ತಿಮ್ಮೇಗೌಡ ತಿಳಿಸಿದ್ದಾರೆ.  
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ, ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಕಲಾ ಪದವಿ ವಿಷಯವನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದರಿಂದ, ಹಲವು ಕಾಲೇಜುಗಳಲ್ಲಿ ಕಲಾ ಪದವಿಗೆ ಸಂಬಂಧಿಸಿದ ತರಗತಿಗಳನ್ನೇ ಮುಚ್ಚಲಾಗುತ್ತಿದೆ. ವಿದ್ಯಾರ್ಥಿಗಳನ್ನು ಕಲಾ ಪದವಿ ವಿಷಯದತ್ತ ಸೆಳೆಯಲು ಸಾಕಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಆದರೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿಲ್ಲ ಎಂದು ಬೆಂಗಳೂರು ವಿವಿಯ ರಿಜಿಸ್ಟಾರ್ ಕೆ.ಕೆ ಸೀತಮ್ಮ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕಾಗಿಯೇ ಪ್ರತಿ 6 ತಿಂಗಳಿಗೆ 4 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ ತರಗತಿಗಳನ್ನು ನಡೆಸುವ ಕಾಲೇಜುಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಸೀತಮ್ಮ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಕಲಾ ಪದವಿ ವಿಷಯದ ಬಗ್ಗೆ ತಿಳಿಹೇಳಬೇಕಿದೆ. ಮುಂದೊಂದು ದಿನ ಯಾರೂ ಈ ವಿಷಯವನ್ನು ಅಧ್ಯಯನ ಮಾಡದೇ ಇದ್ದರೆ ಶಾಲೆಗಳಲ್ಲಿ ಭಾಷೆ ಸಮಾಜವಿಜ್ಞಾನದಂತಹ ವಿಷಯಗಳನ್ನು ಯಾರು ಕಲಿಸುತ್ತಾರೆ ಎಂದು ಎನ್.ಎಂ.ಕೆ.ಆರ್.ವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ವಾಣಿ ಪ್ರಶ್ನಿಸಿದ್ದಾರೆ.  

Related Stories

No stories found.

Advertisement

X
Kannada Prabha
www.kannadaprabha.com