ಮುಕ್ತ ವಿವಿ ಕಾಯ್ದೆ ತಿದ್ದುಪಡಿಗೆ ಪರಿಶೀಲಿಸಿ ಕ್ರಮ: ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಮುಕ್ತ ವಿವಿ(ಕೆಎಸ್ಒಯು)ಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಮಾತನಾಡಿದ ಅವರು, ವಿವಿಯ ಮಾನ್ಯತೆ ರದ್ದುಗೊಂಡಿರುವುದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.  ವಿವಿಯ ಭೌಗೋಳಿಕ ಕಾರ್ಯವ್ಯಾಪ್ತಿಗೆ ಸಂಬಂಧಿಸಿದಂತೆ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಪರಿಶೀಲಿಸುತ್ತೇವೆ. ಈಗ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿವಿ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಆಗಿರುವ ಲೋಪ ಸರಿಪಡಿಸುವ ಜೊತೆಗೆ ವಿವಿಯ ಈ ಸ್ಥಿತಿಗೆ ಕಾರಣವಾದ ಕುಲಪತಿಗಳ ವಿರುದ್ಧ ಕ್ರಮ ಜರುಗಿಸಬೇಕು. ಉನ್ನತ ಮಟ್ಟದ ನಿಯೋಗ ತೆರಳಿ ಮಾನ್ಯತೆಯನ್ನು ನವೀಕರಿಸಿ ಮುಕ್ತ ವಿವಿಯ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಮಾಜಿ ಸಚಿವ ಎಸ್.ಎ ರಾಮದಾಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಯುಜಿಸಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣ ನೀಡಿ ಕಳೆದ ವಾರ ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ರದ್ದುಗೊಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com