ಸುಷ್ಮಾ, ರಾಜೇ ರಾಜಿನಾಮೆ ತನಕ ಹೋರಾಟ ಕೈಬಿಡಲ್ಲ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಿನಾಮೆ ನೀಡುವವರೆಗೂ ವಿಧಾನಸಭಾ ಕ್ಷೇತ್ರ...
ಕಾಂಗ್ರೆಸ್
ಕಾಂಗ್ರೆಸ್

ಬೆಂಗಳೂರು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಿನಾಮೆ ನೀಡುವವರೆಗೂ ವಿಧಾನಸಭಾ ಕ್ಷೇತ್ರ, ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಇದು ಪ್ರದೇಶ ಕಾಂಗ್ರೆಸ್ ಸಮಿತಿ ತೀರ್ಮಾನ.

ಹೀಗೆಂದು ಗುಡುಗಿದವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ. ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬಿಜೆಪಿ ನಾಯಕರ ರಾಜಿನಾಮೆಗೆ ಆಗ್ರಹಿಸಿ ರಾಜ್ಯ ಸಚಿವರು, ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲಲಿತ್ ಮೋದಿ ಐಪಿಎಲ್ ಬೆಟ್ಟಿಂಗ್ ಹಗರಣದಲ್ಲಿ ಭಾಗಿಯಾಗಿದ್ದರೂ ಅವರಿಗೆ ಇಂಗ್ಲೆಂಡ್‍ಗೆ ತೆರಳಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹಕಾರ ನೀಡಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಮಗ ದುಷ್ಯಂತ ಸಿಂಗ್ ವ್ಯಾವಹಾರಿಕ ಸಂಬಂಧ ಹೊಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಶರಣಾಗಿ ಬೆಂಬಲ ನೀಡುತ್ತಿದ್ದಾರೆ. ರಾಜಿನಾಮೆ ನೀಡುವವರೆಗೆ ರಾಜ್ಯಸಭೆ ಹಾಗೂ ಲೋಕಸಭೆಯ ಕಲಾಪ ನಡೆಯದಂತೆ ಒತ್ತಡ ಹೇರಲಾಗುವುದು ಎಂದು ಹೇಳಿದರು. ಪೈಸಾ ಲೀಗ್: ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಐಪಿಎಲ್ ಎಂಬುದು ಇಂಡಿಯನ್ ಪೈಸಾ ಲೀಗ್ ಆಗಿದ್ದು, ಕಪ್ಪು ಹಣವನ್ನು ಬಿಳಿ ಮಾಡಲು ಬಳಸಿಕೊಳ್ಳಲಾಯಿತು. ಕಪ್ಪುಹಣ ಹಾಗೂ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿಗೆ ತಮ್ಮ ಸರ್ಕಾರದಲ್ಲೇ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್, ವಿಧಾನಪರಿಷತ್ತಿನ ಸದಸ್ಯರಾದ ವಿ.ಎಸ್. ಉಗ್ರಪ್ಪ, ಕೆ. ಗೋವಿಂದರಾಜು, ಮಾಜಿ ಸಚಿವ ಎಂ.ವಿ.ರಾಜಶೇಖರನ್, ಶಾಸಕ ಎಸ್.ಟಿ. ಸೋಮಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com