ಬೆಂಗಳೂರು: ಸರ್ಕಾರದ ಹಿರಿಯ ಅಧಿಕಾರಿಯೊಬ್ಬರನ್ನು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಕರೆಸಿ, ಅವರಿಂದ 1 ಕೋಟಿ ಲಂಚ ಕೇಳಲಾಯಿತು ಎಂಬ ಪ್ರಕರಣದ ಬಗ್ಗೆ ತನಿಖೆಗೆ ನಡೆಸುವಂತೆ ಲೋಕಾಯುಕ್ತ ನ್ಯಾಯಾಮೂರ್ತಿ ವೈ ಭಾಸ್ಕರ್ ರಾವ್ ಅವರು ನಗರ ಅಪರಾಧ ವಿಭಾಗಕ್ಕೆ(ಸಿಸಿಬಿ) ಆದೇಶಿಸಿರುವುದಕ್ಕೆ ಉಪಲೋಕಾಯುಕ್ತ ನ್ಯಾ.ಸುಭಾಷ್ ಬಿ.ಆಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರರು ತನಿಖೆಗೆ ಆದೇಶಿಸುವ ಮುನ್ನ ನನ್ನ ಸಲಹೆ ಕೇಳಿಲ್ಲ, ಅವರು ಆತುರದ ನಿರ್ಧಾರ ಕೈಗೊಂಡಿದ್ದಾರೆ ಎಂದು ಉಪಲೋಕಾಯುಕ್ತ ಸುಭಾಷ್ ಬಿ ಆಡಿ ಹೇಳಿದ್ದಾರೆ.
ಗುರುವಾರ ಮಧ್ಯಾಹ್ನದವರೆಗೂ ಯಾವುದೇ ನಿರ್ಧಾರವಾಗಿರಲಿಲ್ಲ, ಶುಕ್ರವಾರ ಮಧ್ಯಾಹ್ನ ಏಕಾಏಕಿ ತನಿಖೆಗೆ ಆದೇಶಿಸಿದ್ದಾರೆ. ಸಿಸಿಬಿ ಲೋಕಾಯುಕ್ತದ ಕೈಕೆಳಗೆ ಬರುವ ತನಿಖಾ ಸಂಸ್ಥೆಯಾಗಿದ್ದು, ಸಿಸಿಬಿಗೆ ತನಿಖೆ ನಡೆಸುವ ಅಧಿಕಾರ ಇದೆಯಾ ಗೊತ್ತಿಲ್ಲ. ಈ ಬಗ್ಗೆ ಪರಿಶೀಲಿಸಬೇಕಿತ್ತು ಎಂದ ಅವರು, ಭ್ರಷ್ಟಾಚಾರ ಪ್ರಕರಣಗಳಲ್ಲಿ ತನಿಖೆ ನಡೆಸುವ ಅಧಿಕಾರ ಲೋಕಾಯುಕ್ತ ಸಂಸ್ಥೆ ಮತ್ತು ಸಿಬಿಐಗೆ ಮಾತ್ರ ಇದೆ. ಲೋಕಾಯುಕ್ತರ ಪುತ್ರನ ಮೇಲೆಯೇ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಈ ಪ್ರಕರಣ ಸಿಸಿಬಿ ತನಿಖೆ ನಡೆಸುವುದು ಸರಿಯಲ್ಲ ಎಂದು ಆಡಿ ಅಭಿಪ್ರಾಯಪಟ್ಟಿದ್ದಾರೆ.
Advertisement