

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದಟಛಿ ಒಂದು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆರೆಡು ಎಫ್ ಐಆರ್ ಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ.
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಥಣಿಸಂದ್ರದ ಸರ್ವೆ ನಂ. 101/2ರಲ್ಲಿ 2 ಎಕರೆ 29 ಗುಂಟೆ ಅಕ್ರಮ ಡಿನೋಟಿಫಿಕೇಷನ್ ಎಂಬ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಈಗಾಗಲೇ ಅಕ್ರಮ ಡಿನೋಟಿಫಿಕೇಷನ್ ಸಂಬಂಧ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.