ಮೃತ ಓಬಳರೆಡ್ಡಿ
ಜಿಲ್ಲಾ ಸುದ್ದಿ
ಅಪಘಾತ: ನವದಂಪತಿ ಸಾವು
ಮಹಾದೇವಪುರ ಹೊರ ವರ್ತುಲ ರಸ್ತೆ ಬಿ. ನಾರಾಯಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಮೃತಪಟ್ಟಿದ್ದಾರೆ.
ಬೆಂಗಳೂರು: ಮಹಾದೇವಪುರ ಹೊರ ವರ್ತುಲ ರಸ್ತೆ ಬಿ. ನಾರಾಯಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನವ ದಂಪತಿ ಮೃತಪಟ್ಟಿದ್ದಾರೆ.
22 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಆಂಧ್ರಪ್ರದೇಶ ಮೂಲದ ಎಂಜಿನಿಯರ್ ಓಬಳರೆಡ್ಡಿ(27) ಮತ್ತು ಆತನ ಪತ್ನಿ ಸಾಫ್ಟ್‌ವೇರ್ ಎಂಜಿನಿಯರ್ ಉಮಾ(24) ಮೃತಪಟ್ಟ ದಂಪತಿಗಳು.
ಬಾಣಸವಾಡಿಯಲ್ಲಿ ವಾಸವಿದ್ದ ಈ ದಂಪತಿಗಳು ನಿನ್ನೆ ಸಂಜೆ ಸಂಬಂಧಿಗಳನ್ನು ಭೇಟಿ ಮಾಡಿ ವಾಪಸ್ ಮನೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ರಿಂಗ್ ರಸ್ತೆ ರಾಯಲ್ ಎನ್‌ಫೀಲ್ಡ್ ಶೋರೂಮ್ ಮುಂಬಾಗ ಹೋಗುತ್ತಿದ್ದಾಗ ಗಲಿಬಿಲಿಗೊಂಡ ಓಬಳರೆಡ್ಡಿ ಅವರ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇಬ್ಬರು ಕೆಳಗೆ ಬಿದ್ದಾಗ ಹಿಂದಿನಿಂದ ಬರುತ್ತಿದ್ದ ಲಾರಿ ಕೆಳಗೆ ಬಿದ್ದವರ ಮೇಲೆ ಹರಿದಿದ್ದು, ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಲಾರಿ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ