ವೈದ್ಯಾಧಿಕಾರಿಗಳ ಸಂಘಕ್ಕೆ ಕಾಲಾವಕಾಶ

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸಾಮೂಹಿಕ ರಾಜಿನಾಮೆ ಹಾಗೂ ಮುಷ್ಕರ ನಡೆಸದಂತೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಹೈಕೋರ್ಟ್ ಮಾ.20ರವರೆಗೂ ಕಾಲಾವಕಾಶ ನೀಡಿದೆ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಇನ್ನು ಮುಂದೆ ಯಾವುದೇ ಕಾರಣಕ್ಕೂ ಸಾಮೂಹಿಕ ರಾಜಿನಾಮೆ ಹಾಗೂ ಮುಷ್ಕರ ನಡೆಸದಂತೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಹೈಕೋರ್ಟ್ ಮಾ.20ರವರೆಗೂ ಕಾಲಾವಕಾಶ ನೀಡಿದೆ.

ಅಕ್ಟೋಬರ್ 2014ರಲ್ಲಿ ಸರ್ಕಾರಿ ವೈದ್ಯರು ತಮ್ಮ ಜವಾಬ್ದಾರಿ ಅರಿಯದೆ ಸಾಮೂಹಿಕ ರಾಜಿನಾಮೆ ನೀಡಿದ್ದರು. ಇದರಿಂದ ಸಾರ್ವಜನಿಕರು ಭಾರಿ ಪ್ರಮಾಣದಲ್ಲಿ ತೊಂದರೆ ಅನುಭವಿಸಿದ್ದು, ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕೆಂದು ಕೋರಿ ವಕೀಲ ಎನ್.ಪಿಅಮೃತೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ಸೋಮವಾರ ವಿಚಾರಣೆ ನಡೆಸಿದ ಹಿರಿಯ ನ್ಯಾ.ಕೆ.ಎಲ್. ಮಂಜುನಾಥ್ ಮತ್ತು ನ್ಯಾ.ಪಿ.ಬಿ.ಭಜಂತ್ರಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಮಾ.20ಕ್ಕೆ ಮುಂದೂಡಿದೆ. ವಿಚಾರಣೆಯನ್ನು ಮಾ.20ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ವೈದ್ಯಾಧಿಕಾರಿಗಳ ಪರ ವಕೀಲರು. ನಿರ್ಣಯ ತೆಗೆದುಕೊಳ್ಳುವ  ಸಂಬಂಧ ಕೊಂಚ ಕಾಲಾವಕಾಶ ನೀಡಬೇಕೆಂದು ಕೋರ್ಟ್‍ಗೆ ಮನವಿ ಮಾಡಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com