ಮೋದಿಗೆ ದೇಶಪಾಂಡೆ ಅಭಿನಂದನಾ ಪತ್ರ

ಕರ್ನಾಟಕಕ್ಕೆ ಐಐಟಿ ಹಾಗೂ ಹಂಪಿ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಈ ಬಾರಿಯ ಬಜೆಟ್‍ನಲ್ಲಿ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅಭಿನಂದನಾ ಪತ್ರ ಬರೆದಿದ್ದಾರೆ...
ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ
ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ
Updated on: 

ಬೆಂಗಳೂರು: ಕರ್ನಾಟಕಕ್ಕೆ ಐಐಟಿ ಹಾಗೂ ಹಂಪಿ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಈ ಬಾರಿಯ ಬಜೆಟ್‍ನಲ್ಲಿ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅಭಿನಂದನಾ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರದ ಬಹು ವರ್ಷಗಳ ಬೇಡಿಕೆಗೆ ಕೇಂದ್ರ ಸ್ಪಂದಿಸಿದೆ. ಕೇಂದ್ರದ ಇವೆರಡು ಯೋಜನೆಗಳಿಗೆ ರಾಜ್ಯ ಸಂಪೂರ್ಣ ಸಹಕಾರ ನೀಡಲಿದೆ. ಈ ಹಿಂದೆ ಹೇಳಿದಂತೆ ಐಐಟಿಗೆ ಅವಶ್ಯ ಭೂಮಿ ನೀಡಲು ಸರ್ಕಾರ ಬದಟಛಿವಾಗಿದೆ. ಭವಿಷ್ಯದಲ್ಲೂ ಇದೇ ರೀತಿಯ ಸಹಕಾರ ನೀಡಬೇಕು ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ದೇಶಪಾಂಡೆ ಕೋರಿದ್ದಾರೆ.
ಐಐಟಿ, ಐಐಎಸ್‍ಸಿ, ಐಐಎಂ ಹಾಗೂ ಐಐಐಟಿ ಹೊಂದಿದ ಏಕೈಕ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ.

ದೇಶದ ಜ್ಞಾನ ನಗರಿ ಎಂಬ ಖ್ಯಾತಿ ಹೊಂದಿರುವ ಬೆಂಗಳೂರಿಗೆ ಐಐಟಿಯಿಂದ ಮತ್ತಷ್ಟು ಶೈಕ್ಷಣಿಕ ಲಾಭ ಸಿಗಲಿದೆ. ಸ್ಥಳೀಯ ಯುವಕರಿಗೆ ಉತ್ತಮ ಉದ್ಯೋಗ ನೀಡುವುದರ ಜತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಂಪಿ ರಕ್ಷಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರದ ಈ ನೆರವು ಅಗತ್ಯವಾಗಿತ್ತು. ಹಂಪಿಯ ಮೂಲಸೌಕರ್ಯ ಅಭಿವೃದ್ಧಿಗೆ ಈ ಯೋಜನೆ ಲಾಭ ಕೊಡಲಿದೆ. ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ವಿಶ್ವ ಪಾರಂಪರಿಕ ತಾಣವು, ಪ್ರವಾಸೋದ್ಯಮ ಅಭಿವೃದ್ಧಿಯಿಂದ ಸ್ಥಳೀಯರಿಗೆ ಇನ್ನಷ್ಟು ಉದ್ಯೋಗಾವಕಾಶ ನೀಡಲಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com