ಜಿಲ್ಲಾ ಸುದ್ದಿ

ಮದುವೆ ಆಗುವುದಾಗಿ ಅಪ್ರಾಪ್ತೆಗೆ ವಂಚನೆ

ಕೃಷ್ಣರಾಜಪುರ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚಾರವೆಸಗಿ ವಂಚಿಸಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೊಂಡನಹಳ್ಳಿಯಲ್ಲಿ ನಡೆದಿದೆ...

ಮದುವೆ ಆಗುವುದಾಗಿ ಅಪ್ರಾಪ್ತೆಗೆ ವಂಚನೆ
Published On :

ಕೃಷ್ಣರಾಜಪುರ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚಾರವೆಸಗಿ ವಂಚಿಸಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೊಂಡನಹಳ್ಳಿಯಲ್ಲಿ ನಡೆದಿದೆ.

ಆವಲಹಳ್ಳಿ ಸಮೀಪದ ನಾಗೊಂಡನಹಳ್ಳಿಯಲ್ಲಿ ವಾಸವಾಗಿರುವ 17 ವರ್ಷದ ಅಪ್ರಾಪ್ತೆಯನ್ನು ವೈಟ್ ಫೀಲ್ಡ್ ನ ಇಮ್ಮಡಿಹಳ್ಳಿಯ ನಿವಾಸಿ ಪ್ರವೀಣ್ ಕುಮಾರ್ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕುಡಿಯುವ ನೀರು ಸರಬರಾಜು ಮಾಡುವ ನೆಪದಲ್ಲಿ ಸಂತ್ರಸ್ತೆಯ ಮನೆಗೆ ಆಗಾಗ ಬರುತ್ತಿದ್ದ ಆರೋಪಿ, ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ಈ ವಿಷಯ ತಾಯಿಗೆ ಗೊತ್ತಾಗಿ ಬೈದು ಬುದ್ದಿ ಹೇಳಿದ್ದರು. ಆದರೆ, ಪಾಲಕರ ಗಮನಕ್ಕೆ ಬಾರದೇ ಬಾಲಕಿಯನ್ನು ಹೊರಗಡೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ. ಆರೋಪಿ ಪ್ರವೀಣನಿಗೆ ಈಗಾಗಲೇ ಮದುವೆ ಆಗಿದೆ. ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ವೈಟ್ ಫೀಲ್ಡ್  ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.