ದೇಶಪಾಂಡೆ ವಿರುದ್ಧದ ತನಿಖೆಗೆ ಮಧ್ಯಂತರ ತಡೆ

ಐಟಿ ಕಾರಿಡಾರ್ ಯೋಜನೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಐಟಿ ಕಾರಿಡಾರ್ ಯೋಜನೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್ ಏಕಸದಸ್ಯ ಪೀಠ ದೇಶಪಾಂಡೆ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.

ವೈಟ್‌ಫೀಲ್ಡ್, ಮಾರತ್‌ಹಳ್ಳಿ ಹಾಗೂ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಐಟಿ ಕಾರಿಡಾರ್ ಯೋಜನೆ ಮತ್ತು ಕೈಗಾರಿಕೆ ವಲಯ ಆರಂಭಕ್ಕಾಗಿ ಭೂ ಹಂಚಿಕೆ ಮಾಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಇತರ ಹತ್ತು ಮಂದಿ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಬೆಳಂದೂರು ನಿವಾಸಿ ವಾಸುದೇವರೆಡ್ಡಿ ಎಂಬವರು ಖಾಸಗಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ದೇಶಪಾಂಡೆ ವಿರುದ್ಧ ತನಿಖೆ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com