ಬೈಕ್ ಡಿಕ್ಕಿ: ಸವಾರ ಸಾವು

ರಿಂಗ್ ರಸ್ತೆ ಬಿಇಎಲ್ ವೃತ್ತದಲ್ಲಿ ಸೋಮವಾರ ರಾತ್ರಿ ನಿಯಂತ್ರಣ ತಪ್ಪಿದ ಬೈಕ್ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಿಂಗ್ ರಸ್ತೆ ಬಿಇಎಲ್ ವೃತ್ತದಲ್ಲಿ ಸೋಮವಾರ ರಾತ್ರಿ ನಿಯಂತ್ರಣ ತಪ್ಪಿದ ಬೈಕ್ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಅಲಸೂರು ನಿವಾಸಿ ಪ್ರೀತೇಶ್ ಗೌಡ(23) ಮೃತರು. ಸೋಮವಾರ ರಾತ್ರಿ ಸ್ನೇಹಿತರೊಂದಿಗೆ ಊಟಕ್ಕೆ ತೆರಳಿದ್ದ ಆವರು, ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದರು. ಬಿಇಎಲ್ ವೃತ್ತದಲ್ಲಿ ನಿಯಂತ್ರಣ ಕಳೆದುಕೊಂಡ ಬೈಕ್ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದರು.ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com