ಪಾಲಿಕೆ ಆಸ್ತಿ ಮಾಹಿತಿ ಬಹಿರಂಗಕ್ಕೆ ಒತ್ತಾಯ

ಬಿಬಿಎಂಪಿ ಹೊಂದಿರುವ ಸಾರ್ವಜನಿಕ ಆಸ್ತಿಯ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಬಿಬಿಎಂಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು...
ಪ್ರತಿಭಟನಾ ನಿರತ ಕಾರ್ಯಕರ್ತರು.
ಪ್ರತಿಭಟನಾ ನಿರತ ಕಾರ್ಯಕರ್ತರು.

ಬೆಂಗಳೂರು: ಬಿಬಿಎಂಪಿ ಹೊಂದಿರುವ ಸಾರ್ವಜನಿಕ ಆಸ್ತಿಯ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಬಿಬಿಎಂಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾದ ಭೂಮಿ ಹಾಗೂ ಒತ್ತುವರಿದಾರರ ಮೇಲೆ ಬಿಬಿಎಂಪಿ ಜರುಗಿಸಿದ ಕ್ರಮದ ಬಗ್ಗೆ ಮಾಹಿತಿ ನೀಡಬೇಕು. ಭ್ರಷ್ಟಚಾರದ ಕೂಪವಾಗಿ ಬಿಬಿಎಂಪಿ ಮಾರ್ಪಟ್ಟಿದ್ದು, ಕೂಡಲೇ ಬಿಬಿಎಂಪಿ ಆಸ್ತಿಗಳ ವಿವರ ಹಾಗೂ ಒತ್ತುವರಿ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಎಚ್.ಎಸ್. ದೊರೆಸ್ವಾಮಿ ಮಾತನಾಡಿ, ಬಿಬಿ ಎಂಪಿಯಲ್ಲಿ ಅಧಿಕಾರಿಗಳೊಂದಿಗೆ ಕಾರ್ಪೋರೇಟರ್‍ಗಳೂ ಶಾಮೀಲಾಗಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ವಿಭಜನೆಯಾದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಲಿದೆ. ರಾಜ್ಯ ಸರ್ಕಾರ ಶೀಘ್ರವಾಗಿ ಬಿಬಿಎಂಪಿಯನ್ನು ಸೂಪರ್‍ಸೀಡ್ ಮಾಡಬೇಕು ಎಂದು ಒತ್ತಾ ಯಿಸಿದರು.

ಎ.ಟಿ.ರಾಮಸ್ವಾಮಿ ಮಾತನಾಡಿ, 5 ತಿಂಗಳ ಹಿಂದೆ ಒತ್ತುವರಿ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಬಳಿ ಮಾಹಿತಿ ಕೇಳಿದ್ದರೂ ಸೂಕ್ತ ಮಾಹಿತಿ ನೀಡಿರಲಿಲ್ಲ. ಬಿಬಿಎಂಪಿ ಬಳಿ ಆಸ್ತಿ ಬಗ್ಗೆ ಮಾಹಿತಿ ಇಲ್ಲದಿದ್ದರೆ ರಕ್ಷಣೆ ಮಾಡಲು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಆಯುಕ್ತ ಲಕ್ಶ್ಮೀನಾರಾಯಣ, ಬಿಬಿಎಂಪಿ ಆಸ್ತಿಗಳ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುವುದು. ಹಲವೆಡೆ ಒತ್ತುವರಿ ನಡೆದಿದ್ದು, ಕೆಲವು ಪ್ರಕರಣಗಳು ಹೈಕೋರ್ಟ್‍ನಲ್ಲಿ ವಿಚಾರಣೆಯಲ್ಲಿವೆ. ಹೀಗಾಗಿ ಎಲ್ಲ ಮಾಹಿತಿಯನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಪ್ರಕರಣಗಳ ವಿಚಾರಣೆ ಮುಗಿದ ಬಳಿಕ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com