ಮಹಿಳಾ ಪೊಲೀಸ್ ನೇಮಕ

ರಾಷ್ಟ್ರದಲ್ಲಿ ಜನವರಿ 2014ರವರೆಗೆ ಶೇಕಡಾ 6.11ರಷ್ಟು (1,05,325) ಮಹಿಳಾ ಪೊಲೀಸ್ ಸಿಬ್ಬಂದಿ ಇದ್ದಾರೆ. ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಷ್ಟ್ರದಲ್ಲಿ ಜನವರಿ 2014ರವರೆಗೆ ಶೇಕಡಾ 6.11ರಷ್ಟು (1,05,325) ಮಹಿಳಾ ಪೊಲೀಸ್ ಸಿಬ್ಬಂದಿ ಇದ್ದಾರೆ. ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.33ರಷ್ಟು ಪ್ರಮಾಣದಲ್ಲಿ ಮಹಿಳೆಯರನ್ನು ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹರಿಭಾಯಿ ಪಾರ್ಥಿಭಾಯಿ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಹೆಚ್ಚುವರಿ ನೇಮಕ ಹಾಗೂ ಖಾಲಿ ಹುದ್ದೆಗಳ ನೇಮಕ ಸಂದರ್ಭದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಬೇಕು. ಎಲ್ಲಾ ಪೊಲೀಸ್ ಠಾಣೆಯಲ್ಲಿ ಕನಿಷ್ಠ 3 ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್, 10 ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ದಿನದ 24 ಗಂಟೆಯೂ ಮಹಿಳಾ ಸಹಾಯವಾಣಿ ಕಾರ್ಯನಿರ್ವಹಿಸುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಚಿತ್ರದುರ್ಗ ಕ್ಷೇತ್ರದ ಸದಸ್ಯ ಬಿ.ಎನ್ ಚಂದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದರು.

ಮಹಿಳಾ ದೌರ್ಜನ್ಯ ಪ್ರಕರಣಗಳ ವಿಲೇವಾರಿ ಸೇರಿದಂತೆ ಮಹಿಳೆಯರಿಗೆ ಸಂಬಂಧಿಸಿದಂ ಪ್ರಕರಣಗಳ ತನಿಖೆಗೆ ಪೂರಕವಾಗಿ ಮಹಿಳಾ ಪೊಲೀಸ್ ಸಿಬ್ಬಂದಿ ನಿಯೋಜಿಸುವುದು ಅತ್ಯಗತ್ಯವಾಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಶೇ. 33ರಷ್ಟಕ್ಕೆ ಹೆಚ್ಚಿಸಬೇಕು ಎಂದು ಬಿ.ಎನ್.ಚಂದ್ರಪ್ಪ ಅವರು ಒತ್ತಾಯಿಸಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com