ಪಿಯು ಪರೀಕ್ಷೆ 3 ಡಿಬಾರ್

ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಪರೀಕ್ಷಾ ಅಕ್ರಮದಲ್ಲಿ ಮೂವರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಪರೀಕ್ಷಾ ಅಕ್ರಮದಲ್ಲಿ ಮೂವರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ.

ವ್ಯವಹಾರ ಅಧ್ಯಯನ ಮತ್ತು ರಸಾಯನ ಶಾಸ್ತ್ರ ಪರೀಕ್ಷೆಗಳು ಗುರುವಾರ ನಡೆದಿದ್ದು ರಾಜ್ಯದ ಯಾವುದೇ ಕಾಲೇಜಿನಲ್ಲಿ ಅಹಿತಕರ ಘಟನೆ ವರದಿಯಾಗಿಲ್ಲ. ಆದರೆ, ಪರೀಕ್ಷಾ ಅವ್ಯವಹಾರ ಎಸಗಿದ ಕಾರಣಕ್ಕಾಗಿ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೂಡಲಗಿಯ ಶಿವಬೋಧರಂಗ ಪದವಿಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷೆ ಬರೆಯುತ್ತಿದ್ದ ಒಬ್ಬ ಅಭ್ಯರ್ಥಿ, ಬಾಗಲಕೋಟೆ ಬಸವೇಶ್ವರ ವಿಜ್ಞಾನ ಕಾಲೇಜು ಹಾಗೂ ಬೀದರ್ ಜಿಲ್ಲೆಯ ಚಿಟಗುಪ್ಪ ಬಾಲಕರ ಪದವಿಪೂರ್ವ ಕಾಲೇಜಿನ ತಲಾ ಒಬ್ಬಾ ವಿದ್ಯಾರ್ಥಿ ಡಿಬಾರ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com