
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಏ.2ರಿಂದ 4ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟದ ಹಲವು ಸಚಿವರು ಭಾಗವಹಿಸಲಿದ್ದಾರೆ. ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಯಂತೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಸಭೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ರಾಷ್ಟ್ರೀಯ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ 320 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದೇ ಪ್ರಧಾನಿ ಮೋದಿ ನಗರಕ್ಕೆ ಆಗಮಿಸಲಿದ್ದಾರೆ.
ಏ. 3 ರಂದು ಅವರು ಸಭೆಯಲ್ಲಿ ಭಾಗವಹಿಸಿ, ಸಂಜೆ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕೆ ಇನ್ನೂ ಸ್ಥಳ ನಿಗದಿ ಆಗಿಲ್ಲ. ಗುರಿ ಮುಟ್ಟುವ ತವಕ: ಮತ್ತೊಂದೆಡೆ ಪಕ್ಷದ ಸದಸ್ಯತ್ವ ಅಭಿಯಾನ ಭರದಿಂದ ಸಾಗಿದೆ. ಇಲ್ಲಿತನಕ 62 ಲಕ್ಷ ಜನರು ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಹಿಂದಿನ ದಿನಗಳಿಗೆ ಹೋಲಿಕೆ ಮಾಡಿದರೆ ಇದು ಐತಿಹಾಸಿಕ ದಾಖಲೆ. ಆದರೂ, ಪಕ್ಷದ ರಾಜ್ಯ ಘಟಕದ ಗುರಿ 1 ಕೋಟಿ ಇದೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭವಾಗುವ ಹೊತ್ತಿಗೆ ಇದನ್ನು ತಲುಪುವ ಗುರಿ ಹೊಂದಲಾಗಿದೆ ಎಂದರು.
.
ಬಿಎಸ್‍ವೈ ಕಡೆಗಣಿಸಿಲ್ಲ
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯ ಕಾರ್ಯಚಟುವಟಿಕೆಗಳಲ್ಲಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿಲ್ಲ. ಅವರು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರು. ಕಾರ್ಯಕಾರಿಣಿಯೆಂದರೆ ಅಲ್ಲಿ ಅವರು ಇರುತ್ತಾರೆ. ಆ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರಹ್ಲಾದ್ ಜೋಷಿ ಸ್ಪಷ್ಟಪಡಿಸಿದರು.
Advertisement