ಅಕ್ರಮ ಕುರಿತ ತನಿಖಾ ವರದಿ ಪರಿಶೀಲನೆ, ಶೀಘ್ರದಲ್ಲೇ ಸಿಎಂ ಕ್ರಮ

ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ಸೂಪರ್‍ಸೀಡ್ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...
ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ
ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ
Updated on: 

ಬೆಂಗಳೂರು: ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ಸೂಪರ್‍ಸೀಡ್ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಯಡಿಯೂರು ವಾರ್ಡ್‍ನಲ್ಲಿ ಸೋಮವಾರ ವಿವೇಕಾನಂದ ಶಾಲೆಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಸದಸ್ಯರಿಗೆ ಇರುವುದು ಇನ್ನೊಂದೇ ತಿಂಗಳ ಅವಧಿ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರ ಸೂಪರ್‍ಸೀಡ್ ಮಾಡುವ ಯಾವುದೇ ಪ್ರಯತ್ನ ಮಾಡುವುದಿಲ್ಲ. ಸೂಪರ್ ಸೀಡ್ ವದಂತಿ ಮಾಧ್ಯಮಗಳಲ್ಲಿ ಮಾತ್ರ ಪ್ರಕಟವಾಗುತ್ತಿದೆ ಎಂದರು.

ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಆದಷ್ಟು ಬೇಗ ಚುನಾವಣೆ ನಡೆಯಲಿದೆ. ಬಿಬಿಎಂಪಿ ಅಕ್ರಮಗಳ ಬಗ್ಗೆ ಮುಖ್ಯಮಂತ್ರಿ ತನಿಖೆಗೆ ಸೂಚಿಸಿದ್ದರು. ಈಗಾಗಲೇ ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ತನಿಖಾ ವರದಿಯನ್ನೂ ಸಲ್ಲಿಸಿದ್ದಾರೆ. ಇದನ್ನು ಮುಖ್ಯಮಂತ್ರಿಯವರು ಪರಿಶೀಲನೆ ನಡೆಸುತ್ತಿದ್ದು, ಸದ್ಯದಲ್ಲೇ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ತಿಳಿಸಿದರು.

ಶಾಲಾ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವ ಅನಂತಕುಮಾರ್, ಬಿಬಿಎಂಪಿಯನ್ನು ಸೂಪರ್‍ಸೀಡ್ ಮಾಡುವುದು ಸರಿಯಲ್ಲ. ಪಾಲಿಕೆಗೆ ಸಕಾಲಕ್ಕೆ ಚುನಾವಣೆ ನಡೆಸಬೇಕು ಎಂದು ಸಲಹೆ ನೀಡಿದರು. ಮಾಜಿ ಉಪಮುಖ್ಯಮಂತ್ರಿ ಅಶೋಕ್, ಮೇಯರ್ ಶಾಂತಕುಮಾರಿ, ಉಪ ಮೇಯರ್ ರಂಗಣ್ಣ, ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com