ಪುಸ್ತಕ ಖರೀದಿಗೆ ಅನುದಾನ: ಉಮಾಶ್ರೀ

ಸಗಟು ಪುಸ್ತಕ ಖರೀದಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಬೇಕಾಗುವ ಅಗತ್ಯ ಅನುದಾನವನ್ನು ಸಕಾಲಕ್ಕೆ ಒದಗಿಸುವ ಸಂಬಂಧ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಭರವಸೆ ನೀಡಿದರು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ

ಬೆಂಗಳೂರು: ಸಗಟು ಪುಸ್ತಕ ಖರೀದಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಬೇಕಾಗುವ ಅಗತ್ಯ ಅನುದಾನವನ್ನು ಸಕಾಲಕ್ಕೆ ಒದಗಿಸುವ ಸಂಬಂಧ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಭರವಸೆ ನೀಡಿದರು.

ಕನ್ನಡ ಪುಸ್ತಕ ಪ್ರಾಧಿಕಾರದ 2013ನೇ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನಕ್ಕೆ ಆಯ್ಕೆಯಾದವರಿಗೆ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಂಗಳವಾರ ಅವರು ಮಾತನಾಡಿದರು. ಪ್ರಾಧಿಕಾರದಲ್ಲಿ ಮೂರು ವರ್ಷಗಳಿಂದ ಸಗಟು ಪುಸ್ತಕ ಖರೀದಿ ಬಾಕಿ ಉಳಿದಿದೆ. ಇದಕ್ಕಾಗಿ ರು.3 ಕೋಟಿ ಬೇಕಾಗಿದೆ ಎಂದು ಬೇಡಿಕೆ ಸಲ್ಲಿಸಲಾಗಿದೆ. ಅದನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ಅನುದಾನ ಒದಗಿಸಿಕೊಡಲು ತಾವು ಸಿದ್ಧ ಎಂದರು.

ಸಮಕಾಲೀನ ಸಂದರ್ಭದಲ್ಲಿ ಸಾಮಾಜಿಕ ವಿಜ್ಞಾನದ ವಿಷಯಗಳನ್ನು ಹೊರ ತರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರ ಹೆಚ್ಚು ಆದ್ಯತೆ ನೀಡಬೇಕಿದೆ ಎಂದರು. ಪ್ರಾಧಿಕಾರ 2013ನೇ ಸಾಲಿನ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನಗಳಿಗೆ ಅರ್ಹರಾದವರನ್ನು ಆಯ್ಕೆ ಮಾಡಿ, ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ ಮಾತನಾಡಿ, ಪುಸ್ತಕ ಪ್ರಾಧಿಕಾರವು ಶಾಲೆಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡುತ್ತಿದೆ. ಯುವಕರಲ್ಲಿ ಓದುವ ಅಭ್ಯಾಸ ಹೆಚ್ಚಿಸುವ ಸಂಬಂಧ ಗುಂಪುಗಳನ್ನು ರಚನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಆಗಿದೆ ಎಂದರು. ಕನ್ನಡ ಪುಸ್ತಕ ಪ್ರಾ„ಕಾರದ ಅಧ್ಯಕ್ಷ ಡಾ. ಬಂಜಗೆರೆ ಜಯಪ್ರಕಾಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹೇಮಂತ ಸಾಹಿತ್ಯಕ್ಕೆ ` ಅತ್ಯುತ್ತಮ ಪ್ರಕಾಶನ ಪ್ರಶಸ್ತಿ, ಲೇಖಕ ಜಾಣಗೆರೆ ವೆಂಕಟರಾಮಯ್ಯ ಅವರಿಗೆ ` ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ' , ಪ್ರೊ. ಈ.ಟಿ. ಪುಟ್ಟಯ್ಯ ಅವರಿಗೆ `ಡಾ. ಅನುಪಮಾ ನಿರಂಜನ ವೈದ್ಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ಕವಿ ಪ್ರಕಾಶನದ ಡಾ. ಎಚ್.ಅನುಪಮಾ, ಸುಯೋಧನ ಪ್ರಕಾಶನದ ಚಿದಾನಂದ ಗೌಡ, ವಿಕಾಸ ಪ್ರಕಾಶನದ ಆರ್. ಪೂರ್ಣಿಮಾ, ಸೃಷ್ಟಿ ಪಬ್ಲಿಕೇಷನ್ಸ್‍ನ ಸೃಷಿ ನಾಗೇಶ್, ರಂಗಚೇತನ ಸಂಸ್ಕೃತಿ ಕೇಂದ್ರದ ನಂಜುಂಡ ಸ್ವಾಮಿ ಹಾಗೂ ಪುಸ್ತಕಯಾನದ ದೊರೆ ಸ್ವಾಮಿ ಅವರು ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಪಾತ್ರರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com