ಬಿಬಿಎಂಪಿ ಅಕ್ರಮ: ಎಲ್ಲ ಮುಖ್ಯಸ್ಥರಿಗೆ ನೋಟಿಸ್

ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್...
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ಅಕ್ರಮಗಳ ವಿರುದ್ಧ  ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ  ನೀಡಿದ ತನಿಖಾ ವರದಿ ಅನುಸಾರ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಆದರೆ ಕೆಎಂಸಿ ಕಾಯ್ದೆ  ಪ್ರಕಾರ ಮುಂಗಡ ಸೂಚನೆ ನೀಡಬೇಕಿರುವುದರಿಂದ ಸರ್ಕಾರ ಬುಧವಾರ ಬಿಬಿಎಂಪಿಯ ಎಲ್ಲ ಮುಖ್ಯಸ್ಥರಿಗೂ ನೋಟಿಸ್ ನೀಡಿ ಎಚ್ಚರಿಸಿದೆ. ಅಷ್ಟೇ ಅಲ್ಲದೆ ಕಟಾರಿಯಾ ತನಿಖಾ ವರದಿಯಲ್ಲಿ ಪ್ರಸ್ತಾಪಿಸಿದ ಅಕ್ರಮಗಳ ಬಗ್ಗೆ ಪೂರಕ ದಾಖಲೆ ಹಾಗೂ ಸ್ಪಷ್ಟ ವಿವರಣೆಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಮಾರ್ಚ್ 30ರೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಗೋಪಾಲಯ್ಯಅವರು ಮೇಯರ್ ಶಾಂತಕುಮಾರಿ, ಉಪ ಮೇಯರ್ ರಂಗಣ್ಣ ಹಾಗೂ ಆಯುಕ್ತ ಲಕ್ಷ್ಮೀ ನಾರಾಯಣ ಅವರಿಗೆ ನೋಟಿಸ್ ರವಾನಿಸಿದ್ದಾರೆ.

ಏಕೆ ನೋಟಿಸ್?: 2008ರಿಂದ 2013ರ ವರೆಗಿನ ಅವಧಿಯಲ್ಲಿ ಅನೇಕ ಕಾಮಗಾರಿ ಗಳನ್ನು ನಡೆಸುವಾಗ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವಾಗ ಅಕ್ರಮಗಳು ನಡೆದಿರುವ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸ ಲಾಗಿತ್ತು. ಹಾಗೆಯೇ  ಉಪ ಲೋಕಾಯುಕ್ತ ನ್ಯಾ. ಸುಭಾಷ್ ಅಡಿ ಅವರು ಬಿಬಿಎಂಪಿ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದರು. ಇದರಿಂದ ನೂರಾರು ಕೋಟಿ ರುಪಾಯಿ ನಷ್ಟವಾಗಿದೆ ಎಂಬ ವರದಿ . ಅಕ್ರಮಗಳು ಹೆಚ್ಚಾಗಿರುವುದರಿಂದ ಅದನ್ನು ನಿಭಾಯಿಸುವಲ್ಲಿ ಬಿಬಿಎಂಪಿ
ಆಡಳಿತ ಸಂಪೂರ್ಣ ವಿಫಲವಾಗಿದೆ.ಹಣಕಾಸಿನ ಸೂಕ್ತ ನಿರ್ವಹಣೆ ಇಲ್ಲದೆ ಬಿಬಿಎಂಪಿ ಇನ್ನೂ ಹೆಚ್ಚಿನ ಆರ್ಥಿಕ ನಷ್ಟಕ್ಕೆ ಒಳಗಾಗುತ್ತದೆ ಇದೇ ಕಾರಣಕ್ಕಾಗಿ ರಾಜ್ಯ
ಸರ್ಕಾರ ಅನಿವಾರ್ಯವಾಗಿ ಮಧ್ಯ ಪ್ರವೇಶ ಮಾಡಿ, ಅಕ್ರಮಗಳ ಬಗ್ಗೆ ತನಿಖೆಗೆ ಸೂಚಿಸಿತ್ತು. ರಾಜೇಂದ್ರಕುಮಾರ್ ಕಟಾರಿಯಾ ಅವರಿಗೆ ವಹಿಸಿತ್ತು. ಈಗ ತನಿಖಾ ವರದಿ ಪ್ರಕಾರ ಕ್ರಮಕೈಗೊಳ್ಳಲಾಗುತ್ತಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com