ರವಿ ಪ್ರಕರಣ: ಸಿಬಿಐಗೆ ವಹಿಸಲು ಆಗ್ರಹಿಸಿ ಧರಣಿ ಕೈಗೊಂಡ ಬಿಜೆಪಿ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಇಂದು ನಗರದ ಆನಂದರಾವ್...
ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಬಿಜೆಪಿಯಿಂದ ಪ್ರತಿಭಟನೆ...
ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಬಿಜೆಪಿಯಿಂದ ಪ್ರತಿಭಟನೆ...
Updated on: 

ಬೆಂಗಳೂರು:  ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಇಂದು ನಗರದ ಆನಂದರಾವ್  ವೃತ್ತದ ಗಾಂಧಿಪ್ರತಿಮೆ ಬಳಿ ಬೆಳಗಿನಿಂದ ಸಂಜೆವರೆಗೆ ಪ್ರತಿಭಟನೆ ಕೈಗೊಂಡಿದೆ.

ಗಾಂಧಿ ಪ್ರತಿಮೆ ಬಳಿ ಆಗಮಿಸಿದ ಬಿಜೆಪಿ ಮುಖಂಡರು ಪ್ರತಿಭಟನೆ ಆರಂಭಕ್ಕೂ ಮುನ್ನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಡಿ.ಕೆ.ರವಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ಸರ್ಕಾರ ಡಿ.ಕೆ.ರವಿ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರಾಕರಿಸುತ್ತಿದ್ದು, ಮಂಡುತನ ಮೆರೆಯುತ್ತಿದೆ. ಇದೊಂದು ನಾಚಿಕೆಗೇಡಿನ ಸಂಗತಿ. ಡಿ.ಕೆ.ರವಿ ಅವರದು ಆತ್ಮಹತ್ಯೆಯಲ್ಲ ಎಂದು ಜನರೇ ಹೇಳುತ್ತಿದ್ದರೂ, ಅದನ್ನು ಗಂಭೀರವಾಗಿ ಪರಿಗಣಿಸಿ, ಸಿಬಿಐ ತನಿಖೆಗೂ ವಹಿಸದೆ ನಿರ್ಲಕ್ಷ ಮನೋಭಾವ ತೋರಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಮಹಿಳಾ ಐಎಎಸ್ ಅಧಿಕಾರಿ ಹಾಗೂ ರವಿ ಪತ್ನಿ ಅವರ ವಿರುದ್ಧ ಅವಹೇಳನಕಾರಿ ವರದಿ ಪ್ರಕಟಿಸಲಾಗುತ್ತಿದೆ. ಸಿಐಡಿಗೆ ಈ ಪ್ರಕರಣ ವಹಿಸುವ ನೆಪದಲ್ಲಿ ಮನೆ ಮುರಿಯುವ ಕೆಲಸ ಮಾಡುತ್ತಿರುವ ಸರ್ಕಾರ, ಸಾಕ್ಷಿನಾಶಕ್ಕೂ ಮುಂದಾಗಿದೆ ಎಂದು ಆಪಾದಿಸಿದ್ದಾರೆ.

ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸದಿದ್ದರೆ, ಡಿ.ಕೆ.ರವಿ ಹುಟ್ಟೂರಾದ ಕುಣಿಗಲ್‌ನ ದೊಡ್ಡಕೊಪ್ಪಲಿನಿಂದ ಬೆಂಗಳೂರಿನವರೆಗೆ ಬಿಜೆಪಿ ಪಾದಯಾತ್ರೆ ನಡೆಸಿ ವಿಧಾನಸೌಧ ಹಾಗೂ ಮುಖ್ಯಮತ್ರಿ ಮನೆಗೆ ಮುತ್ತಿಗೆ ಹಾಕಲಿದೆ ಎಂದು ಈಶ್ವರಪ್ಪ ಎಚ್ಚರಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಸಿಬಿಐಗೆ ಪ್ರಕರಣ ವಹಿಸದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತೆ ರಾಜ್ಯಸರ್ಕಾರ ವರ್ತಿಸುತ್ತಿದೆ ಎಂದು ದೂರಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ರವಿ ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕಾಗಿದೆ. ಹಾಗಾಗಿ ಸಿಬಿಐಗೆ ವಹಿಸುವುದು ಸೂಕ್ತ. ಜನಾಭಿಪ್ರಾಯವಿದ್ದರೂ ಸರ್ಕಾರ ಮನಸ್ಸು ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com