ಅಪಘಾತ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉಜಿರೆ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಆನಂದ್(28) ಮತ್ತು ಸುಂದರ್(32) ಎಂದು ಗುರುತಿಸಲಾಗಿದೆ.

ಮೃತ ಸವಾರರಿಬ್ಬರೂ ಬೆಳ್ತಂಗಡಿಡ ತಾಲೂಕಿನ ನಿವಾಸಿಗಳಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್ ಜಪ್ತಿ ಮಾಡಿ, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com