ಜಿಲ್ಲಾ ಸುದ್ದಿ

ವರ್ತೂರು ವಿರುದ್ಧ ಲೋಕಾಯುಕ್ತಕ್ಕೆ ದೂರು

ವಶಪಡಿಸಿಕೊಂಡ ಲಾರಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗೆ ಅವ್ಯಾಚ್ಯವಾಗಿ ನಿಂದಿಸಿದ ಕೋಲಾರ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಸಲಾಗಿದೆ...

ವರ್ತೂರು ವಿರುದ್ಧ ಲೋಕಾಯುಕ್ತಕ್ಕೆ ದೂರು
ಕೋಲಾರ ಶಾಸಕ ವರ್ತೂರು ಪ್ರಕಾಶ್
Published On :

ಬೆಂಗಳೂರು: ವಶಪಡಿಸಿಕೊಂಡ ಲಾರಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗೆ ಅವ್ಯಾಚ್ಯವಾಗಿ ನಿಂದಿಸಿದ ಕೋಲಾರ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಸಲಾಗಿದೆ.

ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಕೆಳಹಂತದ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಮೂಲಕ ಶಾಸಕ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಣಧೀರ ಪಡೆ ಸೋಮವಾರ ದೂರು ನೀಡಿದೆ.

ಜತೆಗೆ ಅಧಿಕಾರಿ ಮತ್ತು ವರ್ತೂರು ಪ್ರಕಾಶ ನಡುವೆ ನಡೆದ ಸಂಭಾಷಣೆಯ ಆಡಿಯೋವನ್ನು ಸಲ್ಲಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಲೋಕಾಯುಕ್ತರು ಆಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬಿ.ಹರೀಶ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.