ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದ ಇಬ್ಬರ ಸಾವು: ಪಾಣಾಜೆ ಉದ್ವಿಗ್ನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ತಾಲೂಕಿನ ಪಾಣಾಜೆಯ..
ಪ್ರತಿಭಟನೆ (ಸಾಂದರ್ಭಿಕ ಚಿತ್ರ)
ಪ್ರತಿಭಟನೆ (ಸಾಂದರ್ಭಿಕ ಚಿತ್ರ)
Updated on: 

ಪುತ್ತೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ತಾಲೂಕಿನ ಪಾಣಾಜೆಯ ಇಬ್ಬರು ಮೃತಪಟ್ಟಿದ್ದು,  ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.

ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪಾಣಾಜೆಯಲ್ಲಿ ಮಂಗಳವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರು, ವೈದ್ಯಾಧಿಕಾರಿಗೆ ದಿಗ್ಬಂಧನ ವಿಧಿಸಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಹಲ್ಲೆ ನಡೆಸಿದರು. ಡಿಎಚ್ಒ ಹಾಗೂ ಚಿಕಿತ್ಸೆ ನೀಡಿದ್ದ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಹಿಂದೆ ಕದಲುವುದಿಲ್ಲ ಎಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ಪಾಣಾಜೆಯಲ್ಲಿ ಮಾ.10ರಂದು ನಡೆದಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಬಳಿಕ, ಮಾ.19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಎಂಡೋ ಸಂತ್ರಸ್ತೆ ಆರ್ಲಪದವು ನಿವಾಸಿ ಮಮ್ಮುಂಞ ಅವರ ಪುತ್ರಿ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ 4ನೇ ತರಗತಿಯ ವಿದ್ಯಾರ್ಥಿನಿ ಆಯಿಷತ್ ಹಸೀನಾ (9) ಮತ್ತು ಪಾಣಾಜೆ ಬೊಳ್ಳಿಂಬಳ ನಿವಾಸಿ ಕಿಟ್ಟಣ್ಣ ರೈ ಅವರ ಪತ್ನಿ ಪೂವಕ್ಕ (69) ಮೃತಪಟ್ಟವರು.

ಶಸ್ತ್ರ ಚಿಕಿತ್ಸೆಗೆ ಒಳಗಾದ ಚೆಂಬರಕಟ್ಟೆ ನಿವಾಸಿ ಚನಿಯ ಮಡಿವಾಳ ಅವರ ಪತ್ನಿ ಸುಂದರಿ (45) ಸ್ಥಿತಿ ಗಂಭೀರವಾಗಿದೆ. ಉಚಿತ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದ 30 ಮಂದಿಯಲ್ಲಿ 12 ವದನರಿಗೆ ಶಸ್ತ್ರ ಚಿಕಿತ್ಸೆ ನಡೆಸಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಈ ಶಿಬಿರದಲ್ಲಿ ಭಾಗವಹಿಸಿದ ಫಲಾನುಭವಿಗಳಿಗೆ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿಯಲ್ಲಿ ಶಸ್ತ್ರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತಿದ್ದು, ಈ ಹಣಕ್ಕಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com