ಪ್ರತ್ಯೇಕ ಅಪಘಾತ: ಮೂವರ ಸಾವು

ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ.

ಜಾಲಹಳ್ಳಿ ಸಮೀಪದ ಎಂಇಎ ರೈಲ್ವೆ ಗೇಟ್ ಬಳಿ ಬೈಕ್‍ಗೆ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಹಿಂಬದಿ ಸವಾರ ಲೀಲಾವತಿ (60) ಮೃತಪಟ್ಟಿದ್ದಾರೆ. ಸವಾರ ಹರೀಶ್ (31)ಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂದಿನಿ ಬಡಾವಣೆ ನಿವಾಸಿ ಹರೀಶ್ ಸೋಮವಾರ ತಮ್ಮ ಚಿಕ್ಕಮ್ಮ ಲೀಲಾವತಿ ಯನ್ನು ಹೆಬ್ಬಾಳ ಬಸ್ ನಿಲ್ದಾಣಕ್ಕೆ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಎಂಇಎ ರೈಲ್ವೆ ಗೇಟ್ ಬಳಿ ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಆಗ ಕೆಳಗೆ ಬಿದ್ದ ಲೀಲಾವತಿ ಮೇಲೆ ಹರಿದಿದೆ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ಲೀಲಾವತಿ ಕೆಲ ದಿನಗಳ ಹಿಂದೆ ನಂದಿನಿ
ಬಡಾವಣೆ ಸಹೋದರಿ ಮನೆಗೆ ಬಂದಿದ್ದರು. ವಾಪಸ್ ಊರಿಗೆ ತೆರಳುವುದಕ್ಕಾಗಿ ಬಸ್ ನಿಲ್ದಾಣಕ್ಕೆ ಹರೀಶ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.ಜಾಲಹಳ್ಳಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಟ್‍ಫೀಲ್ಡ್: ಬಾಳೆಗೆರೆ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಮಂಜುನಾಥ್(35) ಮೃತಪಟ್ಟಿದ್ದಾರೆ. ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದ ಮಂಜುನಾಥ್, ವೈಟ್‍ಫೀಲ್ಡ್ ನಿಂದ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸವಾರ ಹೆಲ್ಮೆಟ್ ಧರಿಸದ ಕಾರಣಕ್ಕೆ ತಲೆಗೆ ತೀವ್ರ ಗಾಯಗಳಾಗಿ ಮೃತಪಟ್ಟಿದ್ದಾರೆ.

ಟಿಪ್ಪರ್ ಲಾರಿ ಡಿಕ್ಕಿ: ದೇವನಹಳ್ಳಿ ಸೂಲಿಬೆಲೆ ಬಳಿ ವೇಗವಾಗಿ ಬಂದ ಟಿಪ್ಪರ್ ಲಾರಿ, ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ವಿನಯ್ (30) ಎಂಬುವರು ಮೃತಪಟ್ಟಿದ್ದಾರೆ. ದೇವನಹಳ್ಳಿ ನಿವಾಸಿ ವಿನಯ್ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಸ್ಥಳದಲ್ಲಿ ಟಿಪ್ಪರ್ ಲಾರಿ ಬಿಟ್ಟು ಚಾಲಕ ತಲೆಮರೆಸಿಕೊಂಡಿದ್ದಾನೆ ಎಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com