ಒತ್ತುವರಿದಾರರ ವಿರುದ್ಧ ಯಾವ ಕ್ರಮಕೈಗೊಂಡಿದ್ದೀರಿ?

ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಭೂ ಒತ್ತುವರಿ ನಿಷೇಧ ಕಾಯ್ದೆ ರೂಪಿಸಿದ ನಂತರ ಸರ್ಕಾರ ಈವರೆಗೂ ಒತ್ತುವರಿದಾರರ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದೆ ಎಂದು ಹೈಕೋರ್ಟ್...
ಹೈಕೋರ್ಟ್
ಹೈಕೋರ್ಟ್
Updated on: 

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಭೂ ಒತ್ತುವರಿ ನಿಷೇಧ ಕಾಯ್ದೆ ರೂಪಿಸಿದ ನಂತರ ಸರ್ಕಾರ ಈವರೆಗೂ ಒತ್ತುವರಿದಾರರ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದೆ ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರ ರೂಪಿಸಿರುವ ಕರ್ನಾಟಕ ರಾಜ್ಯ ಭೂ ಒತ್ತುವರಿ ನಿಷೇಧ ಕಾಯ್ದೆ ಅನ್ವಯ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದಿದೆ. ಆದರೆ, ಸರ್ಕಾರ ಈ ವರೆಗೂ ಯಾವ ಕ್ರಮ ತೆಗೆದುಕೊಂಡಿದೆ ಎಂದು ತಿಳಿಯುತ್ತಿಲ್ಲ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸಜ್ಜನ್ ಪೂವಯ್ಯ ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ಸದ್ಯ ಅಧಿವೇಶನ ನಡೆಯುತ್ತಿದ್ದು, ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೈಕೋರ್ಟ್‍ನ ಗಮನಕ್ಕೆ ತಂದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‍ನ ವಿಭಾಗೀಯ ಪೀಠ, ಈ ಕಾಯ್ದೆ 2014ರಲ್ಲಿ ಜಾರಿಯಾಗಿದೆ. ಅಂದಿನಿಂದಲೂ ಅಧಿವೇಶನ ನಡೆಯುತ್ತಿದೆಯೇ ಎಂದು ಸರ್ಕಾರಿ ವಕೀಲರನ್ನು ಖಾರವಾಗಿ ಪ್ರಶ್ನಿಸಿತು. ಬಾಲಸುಬ್ರಮಣಿಯನ್ ಸಮಿತಿ ನೀಡಿದ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು 11 ಲಕ್ಷಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿ ಒತ್ತುವರಿ ಆಗಿದ್ದು, ಇದನ್ನು ಶೀಘ್ರ ತೆರವುಗೊಳಿಸಬೇಕೆಂದು ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು. ವಿಚಾರಣೆ ನಡೆಸಿದ ನ್ಯಾ.ಕೆ.ಎಲ್. ಮಂಜುನಾಥ್ ಮತ್ತು ನ್ಯಾ. ರಾಘವೇಂದ್ರ ಸಿಂಗ್ ಚೌವ್ಹಾಣ್ ಅವರಿದ್ದ ವಿಭಾಗೀಯ ಪೀಠ, ಮುಂದಿನ ವಿಚಾರಣೆಯಲ್ಲಿ ಒತ್ತುವರಿ ತೆರವುಗೊಳಿಸಿದ ಕುರಿತು ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಿ ಏ.28ಕ್ಕೆ ವಿಚಾರಣೆ ಮುಂದೂಡಿದೆ.

ಒತ್ತುವರಿದಾರರ ವಿರುದ್ಧ ಯಾವ ಕ್ರಮಕೈಗೊಂಡಿದ್ದೀರಿ?

ಸಣ್ಣ ಪ್ರಮಾಣದ ಒತ್ತುವರಿದಾರರೆಂಬ ಕಾರಣಕ್ಕೆ ತೆರವುಗೊಳಿಸಬೇಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವೇ? ವಾಸ್ತವವಾಗಿ ಸರ್ವೆ ಇಲಾಖೆ ಸರ್ವೆ ಕಾರ್ಯ ನಡೆಸಿ ಗಡಿ ಗುರುತಿಸಬೇಕು. ಆದರೆ ಇಲಾಖೆ ಸರ್ವೆ ಕಾರ್ಯವನ್ನೇ ನಡೆಸಿಲ್ಲ.

-ನ್ಯಾ.ಕೆ.ಎಲ್.ಮಂಜುನಾಥ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com