ಚರ್ಚ್ ಸ್ಟ್ರೀಟ್ ಸ್ಫೋಟ: ತನಿಖೆ ಎನ್ ಐಎಗೆ ?

ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಪೊಲೀಸರು ವಿಫಲವಾದ ಹಿನ್ನೆಲೆಯಲ್ಲಿ ತನಿಖೆಯನ್ನು ರಾಷ್ಟ್ರೀಯ ತನಿಖಾ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಪೊಲೀಸರು ವಿಫಲವಾದ ಹಿನ್ನೆಲೆಯಲ್ಲಿ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಯ(ಎನ್ ಐಎ)ಕ್ಕೆ ವರ್ಗಾಯಿಸಲು ಗೃಹ ಇಲಾಖೆ ಚಿಂತನೆ ನಡೆಸಿದೆ.

2014ರ ಡಿ.27ರ ರಾತ್ರಿ ಚರ್ಚ್ ಸ್ಟ್ರೀಟ್ ನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟ ನಡೆದು 3 ತಿಂಗಳಾದರೂ ಸ್ಥಳೀಯ ಪೊಲೀಸರು ಯಾವುದೇ ಮಹತ್ವದ ಸುಳಿವು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಸ್ಫೋಟ ಪ್ರಕರಣದ ತನಿಖಾ ಪ್ರಗತಿ ಕುರಿತು ಈಚೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಅಧಇಕಾರಿಗಳ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಎನ್ ಐಗೆವಹಿಸಲು ಗೃಹ ಇಲಾಖೆ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com