
ಬೆಂಗಳೂರು: ನಗರದ ಹೊರವಲಯದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 54 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಬೆಂಗಳೂರುನ ನಗರ ಹೊರವಲಯದ ದೊಡ್ಡಬಳ್ಳಾಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿರುವ ಎವರ್ ಬ್ಲೂ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಆರಂಭದಲ್ಲಿ ಸಾಮಾನ್ಯ ಹೊಗೆಯಂತೆ ಕಂಡ ಬೆಂಕಿ ಸಮಯವಾದಂತೆ ಇಡೀ ಕಾರ್ಖಾನೆಗೆ ಹಬ್ಬಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ 5 ಅಗ್ನಿಶಾಮಕ ವಾಹನಗಳು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕಾರ್ಖಾನೆ ಸುತ್ತಲೂ ದಟ್ಟವಾದ ಹೊಗೆ ಆವರಿಸಿರುವುದರಿಂದ ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಕು ಉಂಟಾಗಿದೆ.
ಇನ್ನು ಈ ಕಾರ್ಖಾನೆಯಲ್ಲಿ ಸುಮಾರು 10 ಕೋಟಿ ಮೌಲ್ಯದ ವಸ್ತುಗಳು, ಬಟ್ಟೆಗಳು ಇತ್ತು ಎಂದು ಹೇಳಲಾಗುತ್ತಿದೆ. ಇನ್ನು ಕಾರ್ಮಿಕ ದಿನಾಚರಣೆಯ ಹಿನ್ನಲೆಯಲ್ಲಿ ನಿನ್ನೆ ಗಾರ್ಮೆಂಟ್ಸ್ ಗೆ ರಜೆ ಇತ್ತು. ಈ ಹಿನ್ನಲೆಯಲ್ಲಿ ಇಂದು ಕಾರ್ಖಾನೆಯಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement