ಅಂತ್ಯಕ್ರಿಯೆಗೆ ಹೋದವರು ಮಸಣ ಸೇರಿದ್ರು!
ಕಲಬುರಗಿ: ಅಂತ್ಯಕ್ರಿಯೆ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.
ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಹಂದರಕಿ ಗ್ರಾಮಕ್ಕೆ ಸೇರಿದ್ದ ಸೇಡಂ ತಾಲೂಕಿನ ಗೌಡಹಳ್ಳಿ ಗ್ರಾಮದ ನಿವಾಸಿಗಳಾದ ಶಿವರಾಯ್(60), ಸಿದ್ದು ಹಡಪದ(35), ಭೀಮು ಬಡಗೇರ(30), ದೇವಿಂದ್ರಪ್ಪ ಬೆಳಗೆರೆ(60) ಹಾಗೂ ದೇವಪ್ಪ ಬೆಳಗೆರೆ(35) ಮೃತರ ದುರ್ದೈವಿಗಳು.
ಗೌಡಹಳ್ಳಿ ಗ್ರಾಮ ಸುಮಾರು 15 ಮಂದಿ ಹಂದರಕಿಯಲ್ಲಿ ಅಂತ್ಯಕ್ರಿಯೆಗಾಗಿ ಹೋಗಿದ್ದರು. ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಪೂರೈಸಿ ಬಳಿಕ ಗ್ರಾಮಕ್ಕೆ ವಾಪಸ್ಸಾಗುವಾಗ ಚಾಲಕ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಪಿ ಹೊಡೆದಿದೆ. ಈ ವೇಳೆ ಈ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇನ್ನುಳಿದಂತೆ 10 ಮಂದಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೇಡಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ