ಕಸ ಮುಕ್ತವಾಗದಿದ್ದರೆ ದಂಡ, ಖಾತಾ ರದ್ದು

ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ...
ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್
ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್

ಬೆಂಗಳೂರು: ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 47 ವಾರ್ಡ್ ಗಳಲ್ಲಿ ಶನಿವಾರ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಪರಿಶೀಲಿಸಿ, ಖಾಲಿ ನಿವೇಶನಗಳಲ್ಲಿ ಸಾರ್ವಜನಿಕರು ಕಸ ಹಾಗೂ ಕಟ್ಟಡ ತ್ಯಾಜ್ಯ ಹಾಕುತ್ತಿದ್ದಾರೆ.

ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಲು ಹಾಗೂ ನಿವೇಶನಕ್ಕೆ ತಂತಿ ಬೇಲಿ ಅಳವಡಿಸಲು ಕೆಲವು ಮಾಲೀಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೊದಲು ಖಾಲಿ ನಿವೇಶನದ ಮಾಲೀಕರಿಗೆ ನೋಟಿಸ್ ನೀಡಿ ನಿವೇಶನ ಸ್ವಚ್ಛವಾಗಿರಿಸಿಕೊಳ್ಳುವಂತೆ ಸೂಚಿಸಬೇಕು. ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ ಖಾತಾ ರದ್ದುಪಡಿಸಬೇಕು ಎಂದು ಎಂಜಿನಿಯರ್ ಗಳಿಗೆ ಸೂಚಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ವಿಜಯಭಾಸ್ಕರ್, ಕಸ ವಿಲೇವಾರಿ ಸೂಕ್ತವಾಗಿ ಆಗುವಂತೆ ಅಭಿಯಾನ ಕೈಗೊಳ್ಳಲಾಗಿದೆ. 28 ವಿಧಾನ ಸಭಾ ಕ್ಷೇತ್ರಗಳಲ್ಲೂ ಅಬಿಯಾನ ನಡೆಯಲಿದೆ ಎಂದರು. ಆಯುಕ್ತ ಜಿ.ಕುಮಾರ್ ನಾಯಕ್ ವಿವಿಧ ವಾರ್ಡ್ ಗಳನ್ನು ಪರಿಶೀಲಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com