ಪಂತಹಳ್ಳಿ(ಮಂಡ್ಯ): ಎರಡು ಬೈಕುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ಪಂತಹಳ್ಳಿ ಗ್ರಾಮದ ಬಳಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಲತೀಫ್(50), ವಜೀರ್ ಖಾನ್(55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Advertisement